ಕುಂದಾಪುರ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾವಳಿ – ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

JANANUDI.COM NETWORK 

ಕುಂದಾಪುರ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾವಳಿ – ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

 

ಕುಂದಾಪುರ, ಆ. 24: ಕುಂದಾಪುರ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ತ್ರೋಬಾಲ್  ಪಂದ್ಯಾವಳಿಯು ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಛೇರಿ ಇವರ ನಿರ್ದೇಶನದಲ್ಲಿ ಬೆಳ್ವೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಆಗೋಸ್ತ್ 24 ರಂದು ಶಾಲಾ ಮೈದಾನದಲ್ಲಿ ನಡೆದ ಪಂದ್ಯಾಟದಲ್ಲಿ ಕುಂದಾಪುರದ ಸಂತ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕೆ ಆಯ್ಕೆಯಾಯಿತು.

    ವಿಜೇತ ತಂಡಕ್ಕೆ ದೈಹಿಕ ಶಿಕ್ಷಕಿ ಶಾಂತಿ ರಾಣಿ  ಬಾರೆಟ್ಟೊ ತರಬೇತಿ ನೀಡಿದ್ದರು. ಶಾಲಾ ಜಂಟಿ ಕಾರ್ಯದರ್ಶಿ ಅ|ವಂ|ಸ್ಟ್ಯಾನಿ ತಾವ್ರೊ ಮತ್ತು ಶಾಲಾ ಮುಖ್ಯಶಿಕ್ಷಕಿ ಡೋರಾ ಸುವಾರಿಸ್ ಅಭಿನಂದಿಸಿದ್ದಾರೆ