ಕೋಲಾರದಲ್ಲಿ ಪೊಲೀಸರು ಬರೋಬ್ಬರಿ 14 ಲಕ್ಷ ರೂ ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ : ರಾಜ್ಯದಲ್ಲಿ ಡ್ರಗ್ಸ್ ಪ್ರಕರಣದ ಸುದ್ದಿ ತೀವ್ರ ಚರ್ಚೆಗೆ ಗ್ರಾಸವಾಗಿರುವಂ ತೆಯೇ ಇತ್ತ ಕೋಲಾರದಲ್ಲಿ ಪೊಲೀಸರು ಬರೋಬ್ಬರಿ 14 ಲಕ್ಷ ರೂ ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ . ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಕುರಿತು ಖಚಿತ ಮಾಹಿತಿ ಪಡೆದ ಕೊಲಾರ ಎಸ್ ಪಿ ಕಾರ್ತಿಕ್ ರೆಡ್ಡಿ ಅವರ ನೇತೃತ್ವದ ಸೈಬರ್ ಅಪರಾಧ , ಆರ್ಥಿಕ ಮತ್ತು ನಾರ್ಕೋಟಿಕ್ ( ಸಿಇಎನ್ ) ವಿಭಾಗದ ವಿಶೇಷ ತಂಡ ಈ ಕಾರ್ಯಾಚರಣೆ ನಡೆಸಿದ್ದಾರೆ . ಪೊಲೀಸ್ ಮೂಲಗಳ ಪ್ರಕಾರ ಆಂಧ್ರ ಪ್ರದೇಶದ ಕಡಪದಿಂದ ಕೋಲಾರ ಶ್ರೀನಿವಾಸಪುರ ಮಾರ್ಗವಾಗಿ ಇನ್ನೋವಾ ಕಾರಿನಲ್ಲಿ ಗಾಂಜಾ ಸಾಗಿಸಲಾಗುತ್ತಿತ್ತು . ಈ ಬಗ್ಗೆ ಖಚಿತ ಮಾಹಿತಿ ಪಡೆದ ಇನ್ಸ್ ಪೆಕ್ಟರ್ ಎಸ್ ಆರ್ ಜಗದೀಶ್ ನೇತೃತ್ವದ ಅಧಿಕಾರಿಗಳ ತಂಡ ಓರ್ವನನ್ನು ಬಂಧಿಸಿ ಕಾರನ್ನು ವಶಕ್ಕೆ ಪಡೆದಿದ್ದಾರೆ . ಖಚಿತ ಮಾಹಿತಿ ಮೇರೆಗೆ ಕೋಲಾರದ ಶ್ರೀನಿವಾಸಪುರದ ತಾಡಿಗೋಲ್ ಕ್ರಾಸ್ ಬಳಿ ಇನ್ನೋವಾ ಕಾರನ್ನು ಅಡ್ಡಗಟ್ಟಲಾಯಿತು .ಈ ವೇಳೆ ಶೇಖ್ ಅಬ್ದುಲ್ ಎಂಬಾತನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ . ಬಂಧಿತ ಆಂಧ್ರಪ್ರದೇಶ ರಾಯಚೋಟಿ ಮೂಲದವ ನೆಂದು ತಿಳಿದುಬಂದಿದೆ . ಅಲ್ಲದೆ ಕಾರಿನಲ್ಲಿದ್ದ ಸುಮಾರು 14 ಲಕ್ಷದ ಗಾಂಜಾ ವಶಕ್ಕೆ ಪಡೆದಿ ದ್ದು , ಕಾರನನ್ನು ಕೂಡ ವಶಪಡಿಸಿಕೊಂ ಡಿ ದ್ದಾರೆ . ಪ್ರಸ್ತುತ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು , ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ . ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ತಂಡ ರಚನೆ ಮಾಡಿದ್ದು , ಬೆಂಗಳೂರಿನಲ್ಲಿ ಒಂದು ತಂಡ ಮತ್ತು ಆಂಧ್ರ ಪ್ರದೇಶದ ರಾಯಚೋಟಿಯಲ್ಲಿ ಮತ್ತೊಂದು ತಂಡ ತನಿಖೆ ನಡೆಸುತ್ತಿದೆ . ಕೆಜಿಎಫ್ , ಕೋಲಾರ , ರಾಮನಗರ , ಬೆಂಗಳೂರು , ಹಾಸನ ಮತ್ತು ಚಿಕ್ಕ ಬಳ್ಳಾಪುರ ಸೇರಿದಂತೆ ಮಧ್ಯ ಶ್ರೇಣಿಯ ಎಲ್ಲಾ ಆರು ಪ್ರದೇಶಗಳಲ್ಲಿ ಗಾಂಜಾ ಭೀತಿ ಹೆಚ್ಚಾಗಿದೆ . ಇಲ್ಲಿ ಈ ಗಾಂಜಾ ಸಮಸ್ಯೆಯನ್ನು ಬೇರು ಸಹಿತ ಕಿತ್ತೊಗೆಯಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ .