ಕೋಲಾರ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಅನಗತ್ಯವಾಗಿ ಬಂಧಿಸಿರುವುದನ್ನು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡನೆ

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ

ಕೋಲಾರ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಅನಗತ್ಯವಾಗಿ ಬಂಧಿಸಿರುವುದನ್ನು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡನೆ

ಕೋಲಾರ,ಅ.30: ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಅನಗತ್ಯವಾಗಿ ಬಂಧಿಸಿರುವುದನ್ನು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿ ಈ ಕೂಡಲೇ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ರವರಿಗೆ ಮನವಿ ಸಲ್ಲಿಸಿದರು.
ನರಸಿಂಹಮೂರ್ತಿ ಅವರನ್ನು ಅನಗತ್ಯವಾಗಿ 20 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ್ರೋಹ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಿ ಬಂಧಿಸಿರುವುದನ್ನು ಖಂಡಿಸುತ್ತೇವೆ.
ನಿಷ್ಠಾವಂತ ಪತ್ರಕರ್ತರಾಗಿ ತನ್ನ ಅಭಿಪ್ರಾಯಗಳನ್ನು ಸಾಂವಿಧಾನಿಕ ಬದ್ಧವಾಗಿ, ಮುಕ್ತವಾಗಿ ವ್ಯಕ್ತಪಡಿಸಲು ಅವಕಾಶ ಕಲ್ಪಿಸುವಂತಾಗಬೇಕು. ಇಲ್ಲವಾದರೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟಾಗುತ್ತದೆ. ನಿರ್ಭಯವಾಗಿ ವೃತ್ತಿನಿರತ ಪತ್ರಕರ್ತರನ್ನ ಭಯಗೊಳಿಸುವಂತಹ ಕೆಲಸವನ್ನು ಸರ್ಕಾರಗಳು ಮಾಡಬಾರದು ಎಂದು ಆಗ್ರಹಿಸಿದರು.
ಹಾಗಾಗಿ ಈ ಕೂಡಲೇ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಬಿಡುಗಡೆಗೊಳಿಸುವ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಮುಕ್ತ ಅವಕಾಶ ಕಲ್ಪಿಸುವ ಕೆಲಸ ರಾಜ್ಯ ಸರ್ಕಾರ ಮಾಡಬೇಕಾಗಿದೆ. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಮನವಿ ಮೂಲಕ ಒತ್ತಾಯಿಸುತ್ತದೆ.
ನಿಯೋಗದಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಬಿ.ವಿ ಗೋಪಿನಾಥ್, ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿ.ಮುನಿರಾಜು, ಪ್ರಧಾನ ಕಾರ್ಯದರ್ಶಿ ಎಸ್.ಕೆ ಚಂದ್ರಶೇಖರ್, ಖಜಾಂಚಿ ಎ.ಜಿಸುರೇಶ್‍ಕುಮಾರ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಎಸ್.ಎನ್.ಪ್ರಕಾಶ್, ಎಸ್.ರವಿಕುಮಾರ್, ಎನ್.ರಾಮು, ಶ್ರೀನಿವಾಸಮೂರ್ತಿ, ಕೆ.ಆರ್.ಹರೀಶ್‍ಬಾಬು, ಸಿ.ವಿ ನಾಗರಾಜ್, ಮದನ್, ಅಶೋಕ್, ಪವನ್, ಅಸೀಪ್‍ಪಾಷ, ಸತೀಶ್, ಹೆಚ್.ಪಿ.ಸುಧಾಕರ್, ಕಿರಣ್, ಗಂಗಾಧರ್ ಉಪಸ್ಥಿತರಿದ್ದರು.