ಕೋಲಾರ :ಮಕ್ಕಳ ಆರೋಗ್ಯ ಹಾಗೂ ಶಿಕ್ಷಣದಲ್ಲಿ ಪರಿಪೂರ್ಣತೆ ತನ್ನಿ ; ಜಿ.ಪಂ. ಅಧ್ಯಕ್ಷರು

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ

 

 

ಕೋಲಾರ :ಮಕ್ಕಳ ಆರೋಗ್ಯ ಹಾಗೂ ಶಿಕ್ಷಣದಲ್ಲಿ ಪರಿಪೂರ್ಣತೆ ತನ್ನಿ ; ಜಿ.ಪಂ. ಅಧ್ಯಕ್ಷರು

 

 

ಕೋಲಾರ ಡಿ.18 : ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಯವರು ರುಚಿ-ಶುಚಿಯಾದ ಆಹಾರ ತಯಾರಿಸಿ ಮಕ್ಕಳ ಆರೋಗ್ಯ ಹಾಗೂ ಶಿಕ್ಷಣದಲ್ಲಿ ಪರಿಪೂರ್ಣತೆ ತರಬೇಕೆಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ತಿಳಿಸಿದರು.
ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿಂದು ತಾಲ್ಲೂಕು ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಕ್ಷರ ದಾಸೋಹ ಆಶ್ರಯದಲ್ಲಿ ನಡೆದ ‘ಶುಚಿ-ರೂಚಿ’ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಅಕ್ಷರ ದಾಸೋಹದಲ್ಲಿ ಸುಚಿತ್ವ, ಸ್ವಚ್ಚತೆ, ಪರಿಕರಗಳ ಸ್ವಚ್ಚತೆ, ಆಹಾರ ಧಾನ್ಯಗಳ ಪರಿಷ್ಕರಣೆ ಅಡುಗೆ ಮಾಡುವ ಸಿಬ್ಬಂದಿಗಳ ವೈಯುಕ್ತಿಕ ಸ್ವಚ್ಚತೆ ಹಾಗೂ ಶುಚಿತ್ವದ ಕಡೆ ಹೆಚ್ಚು ಗಮನಿಸಿ ಆರೋಗ್ಯ ಪೂರ್ಣ ಸಮಾಜ ನಿರ್ಮಿಸಲು ನೆರವಾಗಬೇಕು ಎಂದರು.
ಗುಣಮಟ್ಟದ ಆಹಾರ ತಯಾರಿಸಿ ಮಕ್ಕಳ ಆರೋಗ್ಯ ಸುಧಾರಣೆ ಮಾಡಲು ಹಾಗೂ ಮಕ್ಕಳ ಹಾಜರಾತಿ ಮತ್ತು ಗುಣಮಟ್ಟ ಹೆಚ್ಚಿಸಲು ಇಂತಹ ಕಾಯಾಗಾರಗಳನ್ನು ಅವಶ್ಯಕತೆಯಿದೆ ಎಂದರು.
ಜಿಲ್ಲಾ ಪಂಚಾಯಿತಿ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ತಿಮ್ಮರಾಯಪ್ಪ ಮಾತನಾಡಿ ಶಾಲೆಯ ಪ್ರತಿ ಮಕ್ಕಳಿಗೆ ಅಕ್ಷರ ದಾಸೋಹದ ಅಡುಗೆ ಸಿಬ್ಬಂದಿ ತಾಯಿ ಇದ್ದಂತೆ ಮಕ್ಕಳಿಗೆ ಅದೇ ಪ್ರೀತಿ, ವಿಶ್ವಾಸವನ್ನು ನೀಡುವಂತಾಗಬೇಕು ಎಂದರು.
ಅಡುಗೆ ತಯಾರಿಸಿ ಬಡಿಸುವವರೆಗೆ ಸರ್ಕಾರದ ಎಲ್ಲಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ಮಕ್ಕಳ ಸುರಕ್ಷತೆ, ಸ್ವಚ್ಚತೆಗೆ ಹೆಚ್ಚಿನ ಆಧ್ಯತೆ ನೀಡಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ನಾಗರಾಜಗೌಡ ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲುಕು ಪಂಚಾಯಿತಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಬಾಲಾಜಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಜಿ. ಶ್ರೀನಿವಾಸ್, ಅಕ್ಷರ ದಾಸೋಹ ವಿಭಾಗದ ರಾಜಣ್ಣ., ಶಶಿ, ಅಶೋ ಮುತ್ತಿತರರು ಉಪಸ್ಥಿತರಿದ್ದರು.