ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಚೆಕ್ ಪೊಸ್ಟ್ಗಳಲ್ಲಿ ಚಲನ ವಲನದ ಮೇಲೆ ತೀವ್ರ ನಿಗಾ ಇಡಬೇಕು- ಜಿಲ್ಲಾಧಿಕಾರಿ ಸತ್ಯಭಾಮ.

ಶ್ರೀನಿವಾಸಪುರ: ಚೆಕ್ ಪೊಸ್ಟ್ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಜನರು ಹಾಗೂ ವಾಹನಗಳ ಚಲನ ವಲನದ ಮೇಲೆ ತೀವ್ರ ನಿಗಾ ಇಡಬೇಕು ಎಂದು ಜಿಲ್ಲಾಧಿಕಾರಿ ಸತ್ಯಭಾಮ ಸೂಚಿಸಿದರು.
ತಾಲ್ಲೂಕಿನ ಸೋಮಯಾಜಲಹಳ್ಳಿ ಗ್ರಾಮದ ಸಮೀಪ ನಿರ್ಮಿಸಲಾಗಿರುವ ಅಂತರ ರಾಜ್ಯ ಚೆಕ್ ಪೋಸ್ಟ್ಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ, ಕೃಷಿ ಉತ್ಪನ್ನಗಳು ಹಾಗೂ ಕೃಷಿಗೆ ಪೂಕವಾದ ಪರಿಕರ ಸಾಗಾಣಿಕೆ ಮಾಡುವ ವಾಹನಗಳ ಓಡಾಟಕ್ಕೆ ಅಡ್ಡಿಪಡಿಸಬಾರದು. ಆಸ್ಪತ್ರೆಗೆ ಹೋಗುವ ರೋಗಿಗಳು ಹಾಗೂ ಅನಿವಾರ್ಯ ಪರಿಸ್ಥಿತಿಯಲ್ಲಿ ಸಂಚರಿಸುವ ವ್ಯಕ್ತಿಗಳ ಬಗ್ಗೆ ಮೃದು ಧೋರಣೆ ಅನುಸರಿಸಬೇಕು ಎಂದು ಹೇಳಿದರು.
ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಗುರುಪ್ರಸಾದ್ ಇದ್ದರು.