ಜನಸಂಖ್ಯೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು -ಡಾ.ಎಸ್.ಜಿ.ನಾರಾಯಣಸ್ವಾಮಿ

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ 

ಜನಸಂಖ್ಯೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು -ಡಾ.ಎಸ್.ಜಿ.ನಾರಾಯಣಸ್ವಾಮಿ

ಕೋಲಾರ: ದೇಶದಲ್ಲಿ ಜನಸಂಖ್ಯೆಯು ಹೆಚ್ಚಾಗುತ್ತಿದ್ದು ಇದನ್ನು ನಿಯಂತ್ರಣ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಎಸ್‍ಎನ್‍ಆರ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಎಸ್.ಜಿ. ನಾರಾಯಣಸ್ವಾಮಿ ಅವರು ತಿಳಿಸಿದರು.

 ನಗರದ ಪ್ರವಾಸಿ ಮಂದಿರÀದ ಮುಂಭಾಗ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಜನಸಂಖ್ಯಾ ದಿನಾಚರಣೆಯ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು. 

 ವಿಶ್ವ ಜನಸಂಖ್ಯಾ ದಿನಾಚರಣೆಯನ್ನು 1987 ರಲ್ಲಿ ಮೊಟ್ಟ ಮೊದಲ ಬಾರಿಗೆ ಜಾರಿಗೆ ತರಲಾಯಿತು. ಅಂದಿನಿಂದ ಆರೋಗ್ಯ ಇಲಾಖೆಯು ಪ್ರತಿವರ್ಷ ಈ ದಿನಾಚರಣೆಯನ್ನು ಸತತವಾಗಿ ಆಚರಿಸಿಕೊಂಡು ಬರುತ್ತಿದೆ. ಜನಸಂಖ್ಯಾ ಸ್ಫೋಟವನ್ನು ನಿಯಂತ್ರಿಸುವ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಈ ಜಾಥಾದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

 ನಮ್ಮ ದೇಶದಲ್ಲಿ ಜನಸಂಖ್ಯೆ ನಿಯಂತ್ರಣವಾಗಬೇಕಾದರೆ ಎಲ್ಲಾ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಸಾರ್ವಜನಿಕರು ಕೆಲವೊಂದು ಅಂಶಗಳನ್ನು ಅಳವಡಿಸಿಕೊಳ್ಳಬೇಕಾಗುತ್ತದೆ. ಪ್ರತಿಯೊಂದು ಚುನಾವಣೆಯ ಸಂದರ್ಭದಲ್ಲಿ ಪಕ್ಷಗಳು ಸಂವಿಧಾನದ 79 ನೇ ವಿಧಿಯನ್ವಯ ಚುನಾವಣೆ ಪ್ರಣಾಳಿಕೆಯಲ್ಲಿ ಜನಸಂಖ್ಯಾ ನಿಯಂತ್ರಣದ ಬಗ್ಗೆ ಪ್ರಸ್ತಾವನೆ ಹೊರಡಿಸಬೇಕು. ಅಧಿಕಾರಕ್ಕೆ ಬಂದ ನಂತರ ಅದನ್ನು ಚಾಚು ತಪ್ಪದೇ ಪಾಲಿಸಬೇಕು ಎಂಬ ಕಾಯಿದೆಯನ್ನು ರೂಪಿಸಬೇಕು ಎಂದ ಅವರು ಭ್ರೂಣ ಹತ್ಯೆಯನ್ನು ತಡೆಗಟ್ಟಿ, ಸ್ತ್ರೀ ಶಿಕ್ಷಣಕ್ಕೆ ಪ್ರಾಧಾನ್ಯತೆ ನೀಡಬೇಕು ಎಂದು ತಿಳಿಸಿದರು.

ಚೀನಾ ದೇಶದಲ್ಲಿ ದಂಪತಿಗಳು ಒಂದು ಮಗುವಿಗೆ  ಮಾತ್ರ ಜನನ ನೀಡಬೇಕು. ಅಂತಹವರಿಗೆ ಮಾತ್ರ ಸರ್ಕಾರದಿಂದ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಇಲ್ಲವಾದರೆ ಯಾವುದೇ ರೀತಿಯ ಸೌಲಭ್ಯಗಳನ್ನು ನೀಡಲಾಗುವುದಿಲ್ಲ. ಇಂತಹ ಕಾನೂನುಗಳನ್ನು ಭಾರತ ದೇಶಲದಲ್ಲಿಯೂ ಜಾರಿಗೆ ತರಬೇಕು. ಆಗ ಮಾತ್ರ ಜನಸಂಖ್ಯಾ ನಿಯಂತ್ರಣ ಮಾಡಲು ಸಾಧ್ಯವಾಗುತ್ತದೆ ಎಂದರು. 

 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಎಸ್.ಎನ್.ವಿಜಯ್‍ಕುಮಾರ್ ಅವರು ಮಾತನಾಡಿ, ಆರೋಗ್ಯ ಇಲಾಖೆಯಲ್ಲಿ ಲಭ್ಯವಿರುವ ಎಲ್ಲಾ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು. ಬಾಲ್ಯವಿವಾಹ ತಡೆ ಮತ್ತು ಮಗುವಿನ ನಡುವೆ ಅಂತರ ಕಾಯ್ದುಕೊಳ್ಳಬೇಕಿದೆ ಎಂದು ತಿಳಿಸಿದರು.

 ಇದೇ ಸಂದರ್ಭದಲ್ಲಿ ಕುಟುಂಬ ಕಲ್ಯಾಣ ಯೋಜನೆ ವಿಧಾನದ ಮಾಹಿತಿ ಹೊಂದಿರುವ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.

ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯಾದ ಡಾ.ಭಾರತಿ, ಜಿಲ್ಲಾ ಮಲೇರಿಯಾ ನಿಯಂತ್ರಣಾದಿಕಾರಿಯಾದ ಡಾ.ಕಮಲಮ್ಮ, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರಾಂಶಪಾಲರಾದ ಮಂಜುನಾಥ್, ಆರೋಗ್ಯ ಶಿಕ್ಷಣಾಧಿಕಾರಿಯಾದ ಪ್ರಸನ್ನ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಯಾದ ಗೀತಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು..