ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ಗೆ ಕರ್ನಾಟಕ ಸರಕಾರದ ಸಚಿವರಾದ ಯು.ಟಿ. ಖಾದರ್ ಭೇಟಿ

ವರದಿ: ವಾಲ್ಟರ್ ಮೊಂತೇರೊ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ಗೆ ಕರ್ನಾಟಕ ಸರಕಾರದ ಸಚಿವರಾದ ಯು.ಟಿ. ಖಾದರ್ ಭೇಟಿ

ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಹಾಗೂ ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರೂ ಯುವ ಕೇಂದ್ರದ ಸಹಭಾಗಿತ್ವದಲ್ಲಿ ಜರಗಲಿರುವ ಸ್ವಚ್ವ ಭಾರತ್ ಸಮ್ಮರ್ ಇಂಟರ್‍ಸಿಪ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸೆಪ್ಟೆಂಬರ್ 2 ರಂದು ಜರಗಲಿರುವ 13ನೇ ವರ್ಷದ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಕರ್ನಾಟಕ ಸರಕಾರದ ನಗರಾಭಿವೃದ್ಧಿ ಸಚಿವರಾದ ಯು.ಟಿ. ಖಾದರ್ ಬಿಡುಗಡೆಗೊಳಿಸಿ ಮಾತನಾಡಿದವರು ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಕಳೆದ ಹಲವಾರು ವರ್ಷಗಳಿಂದ ಗ್ರಾಮೀಣ ಪ್ರದೇಶದಲ್ಲಿ ಸೇವೆ, ಸಂಸ್ಕøತಿ, ಧಾರ್ಮಿಕ, ಕ್ರೀಡೆ, ಶೈಕ್ಷಣಿಕ, ಸಂಘಟನಾತ್ಮಕ ಕೆಲಸ ಮಾಡುತಿರುವುದು ನಿಜವಾಗಲೂ ಇತರೆ ಸಂಘ-ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದರು. ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಕೆಲಸ ಕಾರ್ಯಗಳು ಈ ಭಾಗದಲ್ಲಿ ನಡೆಸಲು ನಾನು ನಿಮ್ಮ ಸಂಸ್ಥೆಯೊಂದಿಗೆ ಸದಾ ಸಹಕಾರವನ್ನು ನೀಡುತ್ತೇನೆ ಎಂದು ಭರವಸೆ ನೀಡಿದರು.
ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿಯವರು ಮಾತನಾಡಿ ಪ್ರಪ್ರಥಮ ಬಾರಿಗೆ ನಮ್ಮ ಸಂಸ್ಥೆಗೆ ಕರ್ನಾಟಕ ಸರಕಾರದ ಸಚಿವರೊಬ್ಬರು ಆಗಮಿಸುತ್ತಿರುವುದು ನಮ್ಮ ಸೌಭಾಗ್ಯವೆಂದರು. ಸರಕಾರದ ಕೆಲಸದ ಒತ್ತಡದ ನಡುವೆಯೂ ಗ್ರಾಮೀಣ ಭಾಗದ ನಮ್ಮ ಸಂಸ್ಥೆಯ ಸರಳ ಕಾರ್ಯಕ್ರಮಕ್ಕೆ ಆಗಮಿಸಿರುವುದು ಸಚಿವರ ಸರಳತೆ ನಿಜವಾಗಿಯೂ ಎಲ್ಲರಿಗೂ ಪ್ರೇರಣೆ ಎಂದರು.
ಈ ಸಂಧರ್ಭದಲ್ಲಿ ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇನ್ನ ದೀಪಕ್ ಕೋಟ್ಯಾನ್, ಇನ್ನ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಶ ಮೂಲ್ಯ, ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಹರೀಶ್ ಪೂಜಾರಿ, ನಿಕಟ ಪೂವಾಧ್ಯಕ್ಷ ಸುರೇಶ್ ಪೂಜಾರಿ, ಕಾರ್ಯದರ್ಶಿ ಪ್ರಶಾಂತ್ ಪೂಜಾರಿ, ಸತೀಶ್ ಪೂಜಾರಿ, ಕೋಶಾಧಿಕಾರಿ ಹರಿಪ್ರಸಾದ್ ಆಚಾರ್ಯ, ಸಂಧ್ಯಾ ಶೆಟ್ಟಿ ಹಾಗೂ ಸಂಘದ ಸದಸ್ಯರು ಉಪಸ್ಥಿತಿತರಿದ್ದರು.