ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ರಿ ಪುರಸ್ಕøತ ನಾರಾಯಣ ನಲ್ಕೆಯವರಿಗೆ ಸನ್ಮಾನ

ವರದಿ: ವಾಲ್ಟರ್ ಮೊಂತೇರೊ

 

 

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ರಿ ಪುರಸ್ಕøತ ನಾರಾಯಣ ನಲ್ಕೆಯವರಿಗೆ ಸನ್ಮಾನ 

 

 

ಹತ್ತಾರು ದೈವಸ್ಥಾನಗಳಲ್ಲಿ, ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ತುಳುನಾಡಿನ ದೈವರಾಧನೆಯ ಮೂಲಕ ಪ್ರಸಿದ್ಧರಾದ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಬೋಳ ನಾರಾಯಣ ನಲ್ಕೆಯವರನ್ನು ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ, ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ವಿಂಶತಿ ಸಂಭ್ರಮಾಚರಣೆ ಸಮಿತಿಯ ಅಧ್ಯಕ್ಷ ನಂದಳಿಕೆ ರಾಜೇಶ್ ಕೋಟ್ಯಾನ್, ಸಂಘದ ಕಾರ್ಯದರ್ಶಿ ಪ್ರಶಾಂತ್ ಪೂಜಾರಿ, ಜೊತೆ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಸದಸ್ಯರಾದ ಪದ್ಮಶ್ರೀ ಪೂಜಾರಿ ಅಬ್ಬನಡ್ಕ, ಅಶ್ವಿನಿ ಪ್ರಭಾಕರ್ ಬೋಳ ಮೊದಲಾದವರಿದ್ದರು.