ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಪುಲ್ವಾಮಾ ಹುತಾತ್ಮ ವೀರ ಯೋಧರಿಗೆ ನುಡಿ ನಮನ

ವರದಿ: ವಾಲ್ಟರ್ ಮೊಂತೇರೊ

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಪುಲ್ವಾಮಾ ಹುತಾತ್ಮ ವೀರ ಯೋಧರಿಗೆ ನುಡಿ ನಮನ

ಕಾರ್ಕಳ ತಾಲೂಕಿನ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ನ ವತಿಯಿಂದ ಸಂಘದ ರಂಗಮಂದಿರದಲ್ಲಿ ಹುತಾತ್ಮ ವೀರ ಯೋಧರಿಗೆ ನುಡಿ ನಮನ ಸಲ್ಲಿಸಲಾಯಿತು.
ಜಮ್ಮು ಮತ್ತು ಕಾಶ್ಮೀರದ ಪುಲ್ಮಾಮಾ ಜಿಲ್ಲೆಯ ಆವಂತಿಪೋರಾದಲ್ಲಿ ಗುರುವಾರ ಉಗ್ರರು ನಡೆಸಿದ ದಾಳಿಯಿಂದ ಹುತಾತ್ಮರಾದ 44 ವೀರ ಯೋಧರಿಗೆ ನುಡಿ ನಮನ ಸಲ್ಲಿಸಲಾಯಿತು. ಹುತಾತ್ಮರ ಆತ್ಮಕ್ಕೆ ಶಾಂತಿಕೋರಿ ಮೌನಾಚರಣೆ ಮಾಡಲಾಯಿತು. ಹುತಾತ್ಮ ಸೈನಿಕರಿಗೆ 44 ಮೊಂಬತ್ತಿ ಬೆಳಗಿಸಿ ಸಂತಾಪ ಸೂಚಿಸಲಾಯಿತು.
ಸೈನಿಕರ ಕುಟುಂಬಗಳ ಮೇಲೆ ಸಹಾನುಭೂತಿ, ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸಗಳು ದೇಶದ ಜನತೆಯಿಂದಾಗಬೇಕು ಎಂದು ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿಯವರು ವೀರ ಯೋಧರ ನುಡಿ ನಮನದಲ್ಲಿ ಮಾತಾನಾಡಿದರು.
ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರಾದ ನಂದಳಿಕೆ ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಹರೀಶ್ ಪೂಜಾರಿ, ಕಾರ್ಯದರ್ಶಿ ಪ್ರಶಾಂತ್ ಪೂಜಾರಿ, ಪೂರ್ವಾಧ್ಯಕ್ಷರಾದ ರಘುವೀರ್ ಶೆಟ್ಟಿ, ಆನಂದ ಪೂಜಾರಿ, ಕಾಸ್ರಬೈಲು ಸುರೇಶ್ ಪೂಜಾರಿ, ಕೋಶಾಧಿಕಾರಿ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ, ಭಜನಾ ಸಮಿತಿ ಅಧ್ಯಕ್ಷರಾದ ಮಂಜುನಾಥ ಆಚಾರ್ಯ ಬೋಳ, ಮಹಿಳಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಸದಸ್ಯರಾದ ಅಬ್ಬನಡ್ಕ ಸುರೇಶ್ ಪೂಜಾರಿ, ಅಬ್ಬನಡ್ಕ ಸತೀಶ್ ಪೂಜಾರಿ, ಸುನಿಲ್ ಕುಲಾಲ್, ಲಲಿತಾ ಆಚಾರ್ಯ, ಪುಷ್ಪ ಕುಲಾಲ್, ವೀಣಾ ಪೂಜಾರಿ, ಸುನೀತಾ ಪಿಂಟೋ ಮೊದಲಾದವರಿದ್ದರು.