ವರದಿ:ವಾಲ್ಟರ್ ಮೋತೇರೊ
ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ :“ಗುಬ್ಬಚ್ಚಿಗೂಡು” ಬೇಸಿಗೆ ಶಿಬಿರ ಉದ್ಘಾಟನೆ
ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಉಡುಪಿ ಮತ್ತು ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಸಂಯುಕ್ತ ಆಶ್ರಯದಲ್ಲಿ ಆದಿತ್ಯವಾರ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ರಂಗಮಂದಿರಲ್ಲಿ “ಗುಬ್ಬಚ್ಚಿಗೂಡು” ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ ಜರಗಿತು.
ಸಮಾರಂಭದ ಉದ್ಘಾಟನೆಯನ್ನು ಬೋಳ ಗ್ರಾಮ ಪಂಚಾಯತ್ನ ಅಧ್ಯಕ್ಷರಾದ ಬೋಳ ಸತೀಶ್ ಪೂಜಾರಿ ಚೆಂಡೆ ಬಾರಿಸುವ ಮೂಲಕ ಉದ್ಘಾಟಿಸಿ ಮಕ್ಕಳ ಪ್ರತಿಭೆಗೆ ವೇದಿಕೆ ಒದಗಿಸುವುದರ ಜೊತೆಗೆ ವ್ಯಕ್ತಿತ್ವ ರೂಪಿಸುವುದಕ್ಕಾಗಿ ಹಮ್ಮಿಕೊಂಡಿರುವ ಉಚಿತ ಬೇಸಿಗೆ ಶಿಬಿರದ ಸದುಪಯೋಗವನ್ನು ಮಕ್ಕಳು ಪಡೆದುಕೊಳ್ಳಬೇಕು ಎಂದು ಹೇಳಿದರು. ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷ ನಂದಳಿಕೆ ರಾಜೇಶ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಅಧ್ಯಕ್ಷ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಮುಂಬೈ ಉದ್ಯಮಿ ಶಶಿಧರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ವೇದಿಕೆಯಲ್ಲಿ ಕಾರ್ಯಕ್ರಮದ ನಿರ್ದೇಶಕ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ, ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ದಿನೇಶ್ ಪೂಜಾರಿ, ಸುರೇಶ್ ಪೂಜಾರಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ ಸಂಘದ ಪದಾಧಿಕಾರಿಗಳು, ಮಹಿಳಾ ಸದಸ್ಯರು ಉಪಸ್ಥಿತಿತರಿದ್ದರು.