ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸ್ವಚ್ಛ ಭಾರತದ ಕನಸು ಹೇಗೆ ನನಸಾದೀತು ಕುರಿತು ಕಾರ್ಯಾಗಾರ

ವರದಿ: ವಾಲ್ಟರ್ ಮೊಂತೇರೊ

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ :
ಸ್ವಚ್ಛ ಭಾರತದ ಕನಸು ಹೇಗೆ ನನಸಾದೀತು ಕುರಿತು ಕಾರ್ಯಾಗಾರ

ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ ಮತ್ತು ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಇದರ ಸಹಯೋಗದಲ್ಲಿ ಮುಂಡ್ಕೂರು ವಿದ್ಯಾವರ್ದಕ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ನೆರೆಹೊರೆ-ಯುವ ಸಂಸತ್ತು (ಕೇಂದ್ರ ಪುರಸ್ಕøತ ಯೋಜನೆಗಳ ಹಾಗೂ ಅನುಷ್ಠಾನದಲ್ಲಿ ಸಮುದಾಯ ಸಂಘಟನೆಗಳ ಪಾತ್ರಗಳ ಕುರಿತು ಮಾಹಿತಿ ಕಾರ್ಯಾಗಾರ) ಕಾರ್ಯಕ್ರಮದಲ್ಲಿ ಸ್ವಚ್ಛ ಭಾರತದ ಕನಸು ಹೇಗೆ ನನಸಾದೀತು ಎಂಬ ವಿಷಯದ ಕುರಿತು ಕಾರ್ಯಾಗಾರ ಜರಗಿತು. ಸಂಪನ್ಮೂಲ ವ್ಯಕ್ತಿ ಮುಂಡ್ಕೂರು ವಿದ್ಯಾವರ್ದಕ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪ್ರಕಾಶ್ ನಾಯ್ಕ್ ಮಾಹಿತಿ ನೀಡಿ ಮಾತನಾಡಿದವರು ಸ್ವಚ್ಛ ಭಾರತದ ಕನಸನ್ನು ಸಾಕಾರಗೊಳಿಸುವ ಉದ್ದೇಶದಿಂದ ದೇಶದಾದ್ಯಂತ ಸ್ವಚ್ಛ ಭಾರತ ಅಭಿಯಾನ ಆರಂಭಗೊಂಡಿದೆ. ಈ ನಿಟ್ಟಿನಲ್ಲಿ ಸನ್ಮಾನ್ಯ ಪ್ರಧಾನ ಮಂತ್ರಿಗಳೇ ಮುಂದಾಗಿ ಕಸಬರಿಕೆ ಹಿಡಿದು ಗುಡಿಸಲು ಮಂದಾಗಿರುವುದು ಜನಸಾಮಾನ್ಯರನ್ನೂ ಪ್ರೇರೇಪಿಸಿದೆ ಎಂದರು.
ಕಾರ್ಯಕ್ರಮದಲ್ಲಿ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ನಂದಳಿಕೆ ರಾಜೇಶ್ ಕೋಟ್ಯಾನ್, ಮುಂಡ್ಕೂರು ವಿದ್ಯಾವಧರ್Àಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುದರ್ಶನ್ ವೈ. ಎಸ್., ಕಾಲೇಜಿನ ಫ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಸವಿತಾ, ಕಾರ್ಕಳ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಉಡುಪಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯ ಅಧಿಕಾರಿ ವಿಲ್ಪ್ರೆಡ್ ಡಿಸೋಜ, ನೆಹರು ಯುವ ಕೇಂದ್ರದ ತಾಲೂಕು ಸಂಯೋಜಕ ಉದಯ ಮರಾಠಿ, ಸಂಘದ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸ್ಥಾಪಕಾಧ್ಯಕ್ಷ ವಿಠಲ ಮೂಲ್ಯ, ಕಾರ್ಯದರ್ಶಿ ಪ್ರಶಾಂತ್ ಪೂಜಾರಿ ಕೋಶಾಧಿಕಾರಿ ಹರಿಪ್ರಸಾದ್ ಆಚಾರ್ಯ ಅಬ್ಬನಡ್ಕ, ಮಾಜಿ ಕಾರ್ಯದರ್ಶಿ ಅಬ್ಬನಡ್ಕ ಸತೀಶ್ ಪೂಜಾರಿ ಮೊದಲಾದವರು ಉಪಸ್ಥಿತಿತರಿದ್ದರು.