ವರದಿ: ವಾಲ್ಟರ್ ಮೊಂತೇರೊ
ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸ್ವಚ್ಛತೆಯ ಮಹತ್ವ ತಿಳಿಸುವ ರಂಗೋಲಿ ಬಿಡಿಸಿ ಸ್ವಚ್ಛತಾ ಜಾಗೃತಿ ಮೂಡಿಸುವ ಕಾರ್ಯ
ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ, ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಹಯೋಗದಲ್ಲಿ ಸ್ವಚ್ಛ ಭಾರತ್ ಸಮ್ಮರ್ ಇಂಟರ್ನ್ಶಿಪ್ ಕಾರ್ಯಕ್ರಮದಡಿಯಲ್ಲಿ ಸ್ವಚ್ಛತೆಯ ಮಹತ್ವ ತಿಳಿಸುವ ರಂಗೋಲಿ ಬಿಡಿಸಿ ಸ್ವಚ್ಛತಾ ಜಾಗೃತಿಯ ಅರಿವು ಮೂಡಿಸುವ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದಲ್ಲಿ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷ ರಾಜೇಶ್ ಕೋಟ್ಯಾನ್ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯಕ್ರಮದ ನಿರ್ದೇಶಕ ಅಬ್ಬನಡ್ಕ ಸತೀಶ್ ಪೂಜಾರಿ, ಕಾರ್ಯದರ್ಶಿ ಪ್ರಶಾಂತ್ ಪೂಜಾರಿ, ಕೋಶಾಧಿಕಾರಿ ಹರಿಪ್ರಸಾದ್ ಆಚಾರ್ಯ, ಮಂಜುನಾಥ ಆಚಾರ್ಯ, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಅಬ್ಬನಡ್ಕ ಶ್ರೀ ವನದುರ್ಗಾ ಸ್ವ-ಸಹಾಯ ಸಂಘದ ಅಧ್ಯಕ್ಷೆ ಲಲಿತಾ ಆಚಾರ್ಯ ಮೊದಲಾದವರಿದ್ದರು.