ನಿವಾಸಪುರ ತಾಲ್ಲೂಕಿನ ನಂಬಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಕಾಂಗ್ರೆಸ್‌ನ ಆರ್‌.ರೂಪ ಅವಿರೋಧ ಆಯ್ಕೆಯಾಗಿದ್ದಾರೆ.

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ
ನಿವಾಸಪುರ ತಾಲ್ಲೂಕಿನ ನಂಬಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಕಾಂಗ್ರೆಸ್‌ನ ಆರ್‌.ರೂಪ ಅವಿರೋಧ ಆಯ್ಕೆಯಾಗಿದ್ದಾರೆ.
ಶ್ರೀನಿವಾಸಪುರ: ತಾಲ್ಲೂಕಿನ ನಂಬಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಕಾಂಗ್ರೆಸ್‌ನ ಆರ್‌.ರೂಪ ಅವಿರೋಧ ಆಯ್ಕೆಯಾಗಿದ್ದಾರೆ.
  ಈ ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಯಿತು. ಒಟ್ಟು 19 ಸದಸ್ಯರ ಪೈಕಿ ಕಾಂಗ್ರೆಸ್‌ನ 15 ಹಾಗೂ ಜೆಡಿಎಸ್‌ನ ಇಬ್ಬರು ಸದಸ್ಯರು ಹಾಜರಿದ್ದರು. ಬೇರಾರೂ ನಾಮಪತ್ರ ಸಲ್ಲಿಸದ ಪರಿಣಾಮವಾಗಿ ಆರ್‌.ರೂಪ ಅವರನ್ನು ಅವಿರೋಧ ಆಯ್ಕೆ ಮಾಡಲಾಯಿತು ಎಂದು ಚುನಾವಣಾಧಿಕಾರಿ ಬಿ.ರೇಣುಕಮ್ಮ ತಿಳಿಸಿದರಿ.
  ಆಯ್ಕೆ ಬಳಿಕ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಚತೆ ವಹಿಸಿ ಮಾತನಾಡಿ, ಶಾಸಕ ಕೆ.ಆರ್.ರಮೇಶ್‌ ಕುಮಾರ್‌ ಅವರ ಮಾರ್ಗದರ್ಶನ ಹಾಗೂ ಸದಸ್ಯ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು.
  ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಿ.ಶಾರದ, ಸಹಾಯಕ ಚುನಾವಣಾಧಿಕಾರಿ ಸುಬ್ರಮಣಿ, ಮುಖಂಡರಾದ ಕೆ.ರೆಡ್ಡಪ್ಪ, ಮುನಿವೆಂಕಟಪ್ಪ, ನಾರಾಯಣಸ್ವಾಮಿ, ವೆಂಕಟೇಶಪ್ಪ, ಕೆ.ಕೆ.ಮಂಜುನಾಥರೆಡ್ಡಿ, ಪಿಡಿಒ ನಾರಾಯಣಪ್ಪ ಇದ್ದರು.