ನಿವಾಸಪುರ: ತಾಲ್ಲೂಕಿನ ಮಾಸ್ತೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ಮಂಜೂರಾಗಿದ್ದ ಜಮೀನು ಒತ್ತುವರಿಯನ್ನು ಕಂದಾಯ ಇಲಾಖೆ ಅಧಿಕಾರಿಗಳು ತೆರವುಗೊಳಿಸಿದರು.

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

 

ನಿವಾಸಪುರ: ತಾಲ್ಲೂಕಿನ ಮಾಸ್ತೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ಮಂಜೂರಾಗಿದ್ದ ಜಮೀನು ಒತ್ತುವರಿಯನ್ನು ಕಂದಾಯ ಇಲಾಖೆ ಅಧಿಕಾರಿಗಳು ತೆರವುಗೊಳಿಸಿದರು.

 

 

‘ಸರ್ವೆ ನಂಬರ್‌ 88 ರಲ್ಲಿ 2.15 ಎಕರೆ ಜಮೀನನ್ನು ಗ್ರಾಮದ ಸರ್ಕಾರಿ ಶಾಲೆಗೆ ಮಂಜೂರು ಮಾಡಲಾಗಿತ್ತು. ಆದರೆ ಆ ಜಮೀನನ್ನು 8 ಮಂದಿ ರೈತರು ಒತ್ತುವರಿ ಮಾಡಿಕೊಂಡಿದ್ದರು’ ಎಂದು ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ತಿಳಿಸಿದರು.
ಗ್ರಾಮಸ್ಥರು ಶಾಲಾ ಆಸ್ತಿಯ ಉಸ್ತುವಾರಿ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಒತ್ತುವರಿ ಮಾಡಿಕೊಳ್ಳಲು ಅವಕಾಶ ನೀಡಬಾರದು. ಯಾವುದೇ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳುವುದು ಕಾನೂನುಬಾಹಿರ ನಡವಳಿಕೆಯಾಗುತ್ತದೆ ಎಂದು ಹೇಳಿದರು.
ತಾಲ್ಲೂಕಿನಲ್ಲಿ ಕೆರೆ ಹಾಗೂ ರಾಜಕಾಲುವೆಗಳ ಒತ್ತುವರಿ ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ. ಅಳತೆ ಮಾಡಿಸಿದ ಬಳಿಕ ಕೆರೆಯ ಸುತ್ತ ಕಾಲುವೆ ನಿರ್ಮಿಸಿ ಹದ್ದಬಸ್ತು ನಿರ್ಮಿಸಲಾಗುತ್ತಿದೆ. ಇದರಿಂದ ಕೆರೆ ಕೆರೆಯಾಗಿ ಉಳಿಯಲು ಸಾಧ್ಯವಾಗುತ್ತದೆ. ಕೆರೆಗಳನ್ನು ಕಬಳಿಸಿದರೆ ಮುಂದೆ ಅಂತರ್ಜಲ ಸಿಗದೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಹೇಳಿದರು.
ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಗ್ರಾಮ ಲೆಕ್ಕಾಧಿಕಾರಿ ವಸುಂದರಾದೇವಿ ಇದ್ದರು.