ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ  ಶರಣು :ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಕಳೆದ ವಾರ ಆತ್ಮಹತ್ಯೆ ಮಾಡಿಕೊಂಡಿದ್ದರು !

JANANUDI.COM NETWORK

 

 

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ  ಶರಣು :ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಕಳೆದ ವಾರ ಆತ್ಮಹತ್ಯೆ ಮಾಡಿಕೊಂಡಿದ್ದರು !

 

 

ಮುಂಬಯ್: ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ರಜಪೂತ್ 34 ವರ್ಷದ ನಟ ಬಾಂದ್ರಾದಲ್ಲಿನ ತಮ್ಮ ನಿವಾಸದಲ್ಲಿ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾನೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಸುಶಾಂತ್ ಸಿಂಗ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಕಳೆದ ವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಲಿಯಾನ್ ಆತ್ಮಹತ್ಯೆಗೆ ದುಖ: ವ್ಯಕ್ತಪಡಿಸಿ ಸುಶಾಂತ್ ಸಿಂಗ್ ಟ್ವಿಟ್ ಮಾಡಿದ್ದರು.

 

1986 ಜನವರಿ 21ರಂದು ಬಿಹಾರದ ಪಾಟ್ನಾದಲ್ಲಿ ಜನಿಸಿದ್ದ ಸುಶಾಂತ್ ಸಿಂಗ್ , ಪವಿತ್ರ ರಿಶ್ತಾ ಸೀರಿಯಲ್ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು. ” ಕಾಯ್ ಪೋ ಚೇ’ ಸಿನಿಮಾ ಮೂಲಕ ಮೊದಲ ಬಾರಿಗೆ ಬಾಲಿವುಡ್ ಪ್ರವೇಶಿಸಿದ್ದ ಸುಶಾಂತ್ ಸಿಂಗ್ ಅವರು 11 ಚಿತ್ರಗಳಲ್ಲಿ ನಟಿಸಿದ್ದು, ಫಿಲಂ ಫೇರ್ ಪ್ರಶಸ್ತಿ ಪಡೆದಿದ್ದರು.

ಸುಶಾಂತ್ ಸಿಂಗ್ ನಟಿಸಿದ್ದ ‘ಶುದ್ಧ್ ದೇಶಿ ರೊಮ್ಯಾನ್ಸ್’  ಸಿನಿಮಾದ ನಟನೆ ಮೆಚ್ಚುಗೆಗೆ ಪಾತ್ರವಾಗಿತ್ತು. ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಜೀವನಾಧಾರಿತ ಚಿತ್ರ ಸುಶಾಂತ್ ಸಿಂಗ್ ಗೆ ದೊಡ್ಡ ಮಟ್ಟದ ಯಶಸ್ಸು ತಂದುಕೊಟ್ಟಿತ್ತು.

ಸುಶಾಂತ್ ಸಿಂಗ್ ನಿವಾಸಕ್ಕೆ ಪೊಲೀಸರು ಧಾವಿಸಿದ್ದು, ತನಿಕೆಯನ್ನು ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣವೇನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಲಾಕ್ ಡೌನ್ ವೇಳೆ ಸುಶಾಂತ್ ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು ಎನ್ನಲಾಗಿದೆ. ಸುಶಾಂತ್ ಸಿಂಗ್ ನಿಧನಕ್ಕೆ ಬಾಲಿವುಡ್ ಕಲಾವಿದ ಗಣ್ಯರು  ದುಖ ವ್ಯಕ್ತಪಡಿಸಿದ್ದಾರೆ..