ವರದಿ: ವಾಲ್ಟರ್ ಮೊಂತೇರೊ
ಬೆಳ್ಮಣ್ಣು : ಉಚಿತ ಮಧುಮೇಹ ತಪಾಸಣಾ ಶಿಬಿರ
ಬೆಳ್ಮಣ್ಣು ಜೇಸಿಐ, ಯುವ ಜೇಸಿ ವಿಭಾಗ, ಜೇಸಿರೇಟ್ ವಿಭಾಗ ಮತ್ತು ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಸಹಯೋಗದಲ್ಲಿ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ರಂಗಮಂದಿರದಲ್ಲಿ ಉಚಿತ ಮಧುಮೇಹ ತಪಾಸಣಾ ಕಾರ್ಯಕ್ರಮ ನಡೆಯಿತು.
ಈ ಸಂಧರ್ಭದಲ್ಲಿ ಸ್ಯಾಮ್ವೆಲ್ ಮಧುಮೇಹ ತಪಾಸಣೆ ಮಾಡಿ ಮಾಹಿತಿ ನೀಡಿದರು. ಜೇಸಿ ವಲಯಾಧಿಕಾರಿ ಸುಭಾಸ್ ಕುಮಾರ್, ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಅಧ್ಯಕ್ಷ ರಾಜೇಶ್ ಕೋಟ್ಯಾನ್, ಬೆಳ್ಮಣ್ಣು ಯುವಜೇಸಿ ವಿಭಾಗದ ಅಧ್ಯಕ್ಷ ದಿಕ್ಷೀತ್ ದೇವಾಡಿಗ, ಜೇಸಿರೇಟ್ ಅಧ್ಯಕ್ಷೆ ಪ್ರತಿಭಾ ರಾವ್, ಯುವಜೇಸಿ ವಿಭಾಗದ ಕಾರ್ಯದರ್ಶಿ ಸಂದೀಪ್ ಕುಮಾರ್ ಹಾಗೂ ಬೆಳ್ಮಣ್ಣು ಜೇಸಿಐನ ಹಾಗೂ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಸದಸ್ಯರುಗಳು ಉಪಸ್ಥಿತಿತರಿದ್ದರು.