ಭಂಡಾರ್ಕಾರ್ಸ್  ಯುಥ್ ರೆಡ್‍ಕ್ರಾಸ್ ವಿಂಗ್, ಎನ್.ಎಸ್.ಎಸ್, ಎನ್.ಸಿ.ಸಿ ರೆಡ್ ರಿಬ್ಬನ್ ಕ್ಲಬ್, ರೆಡ್‍ಕ್ರಾಸ್, ಕುಂದಾಪುರ ಕಸ್ತೂರ್ಬಾ ಆಸ್ಪತ್ರೆ  ಇವರ ಸಹಯೋಗದಲ್ಲಿ ರಕ್ತದಾನ ಶಿಬಿರ

JANANUDI.COM NETWORK 

 

 

ಭಂಡಾರ್ಕಾರ್ಸ್  ಯುಥ್ ರೆಡ್‍ಕ್ರಾಸ್ ವಿಂಗ್, ಎನ್.ಎಸ್.ಎಸ್, ಎನ್.ಸಿ.ಸಿ ರೆಡ್ ರಿಬ್ಬನ್ ಕ್ಲಬ್, ರೆಡ್‍ಕ್ರಾಸ್, ಕುಂದಾಪುರ ಕಸ್ತೂರ್ಬಾ ಆಸ್ಪತ್ರೆ  ಇವರ ಸಹಯೋಗದಲ್ಲಿ ರಕ್ತದಾನ ಶಿಬಿರ

 

 

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕಾಲೇಜಿನ ಯುಥ್ ರೆಡ್‍ಕ್ರಾಸ್ ವಿಂಗ್, ಎನ್.ಎಸ್.ಎಸ್, ಎನ್.ಸಿ.ಸಿ ರೆಡ್ ರಿಬ್ಬನ್ ಕ್ಲಬ್, ರೆಡ್‍ಕ್ರಾಸ್, ಕುಂದಾಪುರ ಮತ್ತು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು.
ಕಾರ್ಯಕ್ರಮವನ್ನು ರೆಡ್‍ಕ್ರಾಸ್, ಕುಂದಾಪುರ ಇದರ ಸಬಾಪತಿಗಳಾದ ಜಯಕರ ಶೆಟ್ಟಿ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.
ಸುಮಾರು 371 ಯುನಿಟ್ ರಕ್ತವನ್ನು ರಕ್ತದಾನಿಗಳಿಂದ ಸಂಗ್ರಹಿಸಲಾಯಿತು. ಮುಖ್ಯವಾಗಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಯುಥ್ ರೆಡ್‍ಕ್ರಾಸ್ ವಿಂಗ್ ಅಧಿಕಾರಿ ಪ್ರೊ.ಸತ್ಯನಾರಾಯಣ, ಮತ್ತು ವಿದ್ಯಾರಾಣಿ ಮತ್ತು ಎನ್.ಎಸ್.ಎಸ್ ಅಧಿಕಾರಿ ಅರುಣ ಎ.ಎಸ್. ಮತ್ತು ರಾಮಚಂದ್ರ ಆಚಾರಿ, ಎನ್.ಸಿ.ಸಿ ಅಧಿಕಾರಿಗಳಾದ ಶರಣ್ ಎಸ್.ಜೆ, ಮತ್ತು ಅಂಜನ್ ಕುಮಾರ್, ಮಣಿಪಾಲದ ರಕ್ತಬ್ಯಾಂಕ್ ಇದರ ವೈಧ್ಯಾಧಿಕಾರಿ ಡಾ.ಶೀತಲ್ ಭಾಗವಹಿಸಿದ್ದರು.