ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ
ಶ್ರೀನಿವಾಸಪುರದ ಕೃಷಿ ಇಲಾಖೆ ಕಚೇರಿ ಆವರಣದಲ್ಲಿ ಲಾಟರಿ ಎತ್ತುವುದರ ಮೂಲಕ ಟಾರ್ಪಾಲಿನ್ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.
ಶ್ರೀನಿವಾಸಪುರ: ಪಟ್ಟಣದ ಕೃಷಿ ಇಲಾಖೆ ಕಚೇರಿ ಆವರಣದಲ್ಲಿ ಲಾಟರಿ ಎತ್ತುವುದರ ಮೂಲಕ ಟಾರ್ಪಾಲಿನ್ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿದ್ದರಿಂದಾಗಿ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.
ಪರಿಶಿಷ್ಟ ಜಾತಿ ಫಲಾನುಭವಿಗಳಿಂದ ಟಾರ್ಪಾಲಿನ್ಗಾಗಿ 1707 ಅರ್ಜಿ ಸಲ್ಲಿಸಲಾಗಿತ್ತು. ಲಾಟರಿ ಎತ್ತಿ 1321 ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ಪರಿಶಿಷ್ಟ ಪಂಗಡಕ್ಕೆ ಸೇರಿದ 730 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಆ ಪೈಕಿ 158 ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಯಿತು. ಸಾಮಾನ್ಯ ವಿಭಾಗದಲ್ಲಿ 2224 ಅರ್ಜಿಗಳು ಬಂದಿದ್ದು, ಎಲ್ಲರಿಗೂ ಟಾರ್ಪಾಲಿನ್ ವಿತರಿಸಲು ತೀರ್ಮಾನಿಸಲಾಯಿತು.
ಅ.16ರನಂತರ ನಿರ್ದಿಷ್ಟ ದಿನಾಂಕಗಳಂದು ಹೋಬಳಿವಾರು ಆಯ್ಕೆಯಾಗಿರುವ ಫಲಾನುಭವಿಗಳಿಗೆ ಟಾರ್ಪಾಲಿನ್ ವಿತರಣೆ ಮಾಡಲಾಗುವುದು. ಹೆಚ್ಚಿನ ವಿವರಗಳಿಗೆ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಅಧಿಕಾರಿ ಮಂಜುನಾಥ್ ತಿಳಿಸಿದರು.