ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ
ಶ್ರೀನಿವಾಸಪುರ: ಜೀವ ಉಳಿಸುವ ಸಲುವಾಗಿ ಯುವಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕು
ಶ್ರೀನಿವಾಸಪುರ: ಜೀವ ಉಳಿಸುವ ಸಲುವಾಗಿ ಯುವಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕು. ರಕ್ತದಾನ ಅತ್ಯಂತ ಶ್ರೇಷ್ಠ ದಾನ ಎಂಬುದನ್ನು ಅರಿಯಬೇಕು ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಮಂಜುನಾಥರೆಡ್ಡಿ ಹೇಳಿದರು.
ಪಟ್ಟಣದ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಸಮೀಪ ಕಸ್ತೂರಿ ಕನ್ನಡ ಜನಪರ ವೇದಿಕೆ ಹಾಗೂ ಆರ್.ಎಲ್.ಜಾಲಪ್ಪ ಆಸ್ಪತ್ರೆ ವತಿಯಿಂದ ರಾಜ್ಯೋತ್ಸವದ ಅಂಗವಾಗಿ ಶನಿವಾರ ಏರ್ಪಡಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಕನ್ನಡ ಪರ ಸಂಘಟನೆಗಳು ರಕ್ತದಾನ ಶಿಬಿರಗಳನ್ನು ಏರ್ಪಡಿಸುತ್ತಿರುವುದು ಸಂತೋಷದ ಸಂಗತಿಯಾಗಿದೆ ಎಂದು ಹೇಳಿದರು.
ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ರಕ್ತದಾನಿಗಳಿಂದ ರಕ್ತಪಡೆದುಕೊಂಡರು.
ಕಸ್ತೂರಿ ಕನ್ನಡ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ಟಿ.ಸುಬ್ರಮಣಿ, ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶಬಾಬು, ಮುಖಂಡರಾದ ಕೆ.ಎಸ್.ಅಶೋಕ್, ಮಹೇಶ್, ಶ್ರೀನಾಥ್, ಕಿರಣ್ ಕುಮಾರ್, ಮಲ್ಲಿಕಾರ್ಜುನ್, ಸಂತೋಷ್ ಇದ್ದರು.
ರಕ್ತದಾನ ಶಿಬಿರದಲ್ಲಿ 50 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ರಕ್ತದಾನಿಗಳಿಗೆ ವೇದಿಕೆ ವತಿಯಿಂದ ಪ್ರಮಾಣ ಪತ್ರ ನೀಡಲಾಯಿತು.