ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಶೇ.81.47 ರಷ್ಟು ಮತದಾನ

ವರದಿ ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಶೇ.81.47 ರಷ್ಟು ಮತದಾನವಾಗಿದೆ. ಬೆಳಿಗ್ಗೆ ನೀರಸವಾಗಿ ಪ್ರಾರಂಭವಾದ ಮತದಾನ, ಮಧ್ಯಾಹ್ನದ ಹೊತ್ತಿಗೆ ಚುರುಕು ಪಡೆದುಕೊಂಡಿತು. ಮತದಾರರು ಉದ್ದನೆಯ ಸಾಲುಗಳಲ್ಲಿ ನಿಂತು ಮತದಾನ ಮಾಡಿದರು.   ತಾಲ್ಲೂಕಿನಲ್ಲಿ ಒಟ್ಟು 4739 ಮತದಾರರಿದ್ದು, ಆ ಪೈಕಿ 3861 ಮತದಾರರು ಮತ ಚಲಾಯಿಸಿದ್ದಾರೆ. 3095 ಪುರುಷ ಮತದಾರರ ಪೈಕಿ 2547 ಹಾಗೂ 1644 ಮಹಿಳಾ ಮತದಾರರ ಪೈಕಿ 1314 ಮತದಾರರು ಮತದಾನ ಮಾಡಿದ್ದಾರೆ.      ಉಪ ವಿಭಾಗಾಧಿಕಾರಿ ವಿ.ಸೋಮಶೇಖರ್‌, ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌, ಉಪ ತಹಶೀಲ್ದಾರ್ ಮಲ್ಲೇಶ್‌, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್‌ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೊರೊನಾ ವೈರಾಣು ಹರಡದಂತೆ ಅಗತ್ಯ ಕ್ರಮ ಕೈಗೊಂಡಿದ್ದರು.