ಶ್ರೀನಿವಾಸಪುರ  ತಾಲ್ಲೂಕು  ಸರ್ಕಾರಿ ನೌಕರರ ಸಂಘದ ಸದಸ್ಯರಿಂದ ಬಂಗಾರಪೇಟೆ ತಹಶೀಲ್ದಾರ್‌ ಬಿ.ಕೆ.ಚಂದ್ರಮೌಳೇಶ್ವರ ಅವರ ಕೊಲೆಯನ್ನು ಖಂಡಿಸಿ ಪ್ರತಿಭಟನೆ

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

 

ಶ್ರೀನಿವಾಸಪುರ  ತಾಲ್ಲೂಕು  ಸರ್ಕಾರಿ ನೌಕರರ ಸಂಘದ ಸದಸ್ಯರಿಂದ ಬಂಗಾರಪೇಟೆ ತಹಶೀಲ್ದಾರ್‌ ಬಿ.ಕೆ.ಚಂದ್ರಮೌಳೇಶ್ವರ ಅವರ ಕೊಲೆಯನ್ನು ಖಂಡಿಸಿ ಪ್ರತಿಭಟನೆ

 

 

 

ಶ್ರೀನಿವಾಸಪುರ: ಇಲ್ಲಿನ ತಾಲ್ಲೂಕು ಕಚೇರಿ ಮುಂದೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಸದಸ್ಯರು, ಬಂಗಾರಪೇಟೆ ತಹಶೀಲ್ದಾರ್‌ ಬಿ.ಕೆ.ಚಂದ್ರಮೌಳೇಶ್ವರ ಅವರ ಕೊಲೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.
ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಂಗವಾದಿ ನಾಗರಾಜ್‌ ಪ್ರತಿಭಟನೆ ನಿರತ ನೌಕರರನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರ ಕಾರ್ಯನಿರ್ವಹಣೆ ಸಂದರ್ಭದಲ್ಲಿ ಬಂಗಾರಪೇಟೆ ತಹಶೀಲ್ದಾರ್‌ ಬಿ.ಕೆ.ಚಂದ್ರಮೌಳೇಶ್ವರ ಅವರನ್ನು ಕೊಲೆ ಮಾಡಿರುವ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸರ್ಕಾರಿ ನೌಕರರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.
ಕೊಲೆಗೀಡಾಗಿರುವ ತಹಶೀಲ್ದಾರ್‌ ಬಿ.ಕೆ.ಚಂದ್ರಮೌಳೇಶ್ವರ ಅವರ ಕುಟುಂಬಕ್ಕೆ ಕನಿಷ್ಠ ರೂ.50 ಲಕ್ಷ ಪರಿಹಾರ ನೀಡಬೇಕು. ಅವರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಅವರಿಗೆ ಸಿಗುವ ಆರ್ಥಿಕ ಸೌಲಭ್ಯಗಳನ್ನು ಶೀಘ್ರವಾಗಿ ನೀಡಬೇಕು. ಸರ್ಕಾರ ಕೊಲೆ ಆರೋಪಿಯ ಜಮೀನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಸರ್ಕಾರಿ ನೌಕರರ ಸಂಘದ ಮುಖಂಡರಾದ ಕೆ.ಎಚ್‌.ಸಂಪತ್‌ ಕುಮಾರ್‌, ಬೈರೇಗೌಡ, ಸಿ.ಎಂ.ವೆಂಕಟರವಣಪ್ಪ, ಶಿವಮೂರ್ತಿ, ಕಲಾ ಶಂಕರ್‌ ಕೃತ್ಯವನ್ನು ಖಂಡಿಸಿ ಮಾತನಾಡಿದರು.
ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ವಿವಿಧ ಸಂಘಟನೆಗಳ ಮುಖಂಡರಾದ ಜಿ.ವಿ.ಚಂದ್ರಪ್ಪ, ಕೆ.ವಿ.ವೇಣುಗೋಪಾಲ್‌, ತಿಪ್ಪಣ್ಣ, ನಾರಾಯಣಪ್ಪ, ಹರಿ ಇದ್ದರು.