ಶ್ರೀನಿವಾಸಪುರ: ತಾಲ್ಲೂಕು ಮುಂದಿನ ಆದೇಶದ ವರೆಗೆ ಸರ್ಕಾರ ಬರಪೀಡಿತ ಪ್ರದೇಶವೆಂದು ಘೋಷಣೆ

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ

ಶ್ರೀನಿವಾಸಪುರ: ತಾಲ್ಲೂಕು ಮುಂದಿನ ಆದೇಶದ ವರೆಗೆ ಸರ್ಕಾರ ಬರಪೀಡಿತ ಪ್ರದೇಶವೆಂದು ಘೋಷಣೆ

ಶ್ರೀನಿವಾಸಪುರ: ತಾಲ್ಲೂಕನ್ನು ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ತಿಂಗಳ ಅವಧಿ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಸರ್ಕಾರ ಬರಪೀಡಿತ ಪ್ರದೇಶವೆಂದು ಘೋಷಿಸಿದೆ ಎಂದು ತಹಶೀಲ್ದಾರ್‌ ಕೆ ಎನ್ ಸುಜಾತಾ ತಿಳಿಸಿದ್ದಾರೆ.

  ಬರದ ತೀವ್ರತೆಯನ್ನು ಅಂದಾಜಿಸಲು ಜಿಲ್ಲಾಧಿಕಾರಿಗಳು ಬರಪೀಡಿತ ಪ್ರದೇಶವೆಂದು ಘೋಷಿಸಿರುವ ತಾಲ್ಲೂಕುಗಳಲ್ಲಿ ಕೇಂದ್ರ ಸರ್ಕಾರ ಪ್ರಕಟಿಸಿರುವ ಬರ ನಿರ್ವಹಣೆ ಕೈಪಿಡಿಯಲ್ಲಿರುವಂತೆ ಬೆಳೆ ಹಾನಿಯ ಬಗ್ಗೆ ಕೂಡಲೆ ಸಮೀಕ್ಷೆ ನಡೆಸಿ, ನಿಗದಿತ ನಮೂನೆಯಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  ಬರಪೀಡಿತ ಪ್ರದೇಶವೆಂದು ಘೋಷಿಸಿರುವ ತಾಲ್ಲೂಕುಗಳಲ್ಲಿ ಭೂರಹಿತ ಕಾರ್ಮಿಕರು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಒದಗಿಸುವ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರು ಸರಬರಾಜು, ಮೇವು ಸರಬರಾಜು ಹಾಗೂ ಜಾನುವಾರು ರಕ್ಷಣೆಗೆ ಪೂರಕವಾದ ಬರ ಪರಿಹಾರ ಕಾರ್ಯಗಳನ್ನು ಎಸ್‌ಡಿಆರ್‌ಎಫ್‌ ಅಥವಾ ಎನ್‌ಡಿಆರ್‌ಎಫ್‌ ಮಾರ್ಗ ಸೂಚಿಯ ಪ್ರಕಾರ ಕೈಗೊಳ್ಳಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

  ಮತದಾರರ ಪಟ್ಟಿಗೆ ಸೇರ್ಪಡೆ: ಅರ್ಹ ವ್ಯಕ್ತಿಗಳಿಂದ ನಮೂನೆ 18 ರಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನ.6 ರವರೆಗೆ ಅವಕಾಶವಿದ್ದು, ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆಗೊಳಿಸಲು ಸೂಕ್ತ ದಾಖಲೆಗಳೊಂದಿಗೆ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಅಥವಾ ನಿಯೋಜಿತ ಅಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.