ಶ್ರೀನಿವಾಸಪುರ ನೇತ್ರ ದೀಪ ಕಣ್ಣಿನ ಆಸ್ಪತ್ರೆ ಹಾಗೂ ರೋಟರಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ

ಶ್ರೀನಿವಾಸಪುರ ನೇತ್ರ ದೀಪ ಕಣ್ಣಿನ ಆಸ್ಪತ್ರೆ ಹಾಗೂ ರೋಟರಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ

ಶ್ರೀನಿವಾಸಪುರ: ಪಟ್ಟಣದ ಗಣೇಶ ದೇವಾಲಯದ ಎದುರು ಎಲ್‌ಐಸಿ ಉಪಗ್ರಹ ಶಾಖೆ ಸಭಾಂಗಣದಲ್ಲಿ ಸೆ.6 ರಂದು ಬೆಳಿಗ್ಗೆ 10 ಗಂಟೆಯಿಂದ ಕೋಲಾರದ ಜಿಇಎಫ್ ನೇತ್ರ ದೀಪ ಕಣ್ಣಿನ ಆಸ್ಪತ್ರೆ ಹಾಗೂ ರೋಟರಿ ಶ್ರೀನಿವಾಸಪುರ ಸೆಂಟ್ರಲ್‌ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಎಲ್‌ಐಸಿ ಅಭಿವೃದ್ಧಿ ಅಧಿಕಾರಿ ರವೀಂದ್ರಯ್ಯ ಕುಲಕರ್ಣಿ ತಿಳಿಸಿದ್ದಾರೆ.
  ಕಣ್ಣಿನ ಸಮಸ್ಯೆ ಇರುವ ವ್ಯಕ್ತಿಗಳು ಸಮಯಕ್ಕೆ ಸರಿಯಾಗಿ ಶಿಬಿರದಲ್ಲಿ ಭಾಗವಹಿಸುವುದರ ಮೂಲಕ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.