ಶ್ರೀನಿವಾಸಪುರ: ವರ್ತಕರು ಕೊರೊನಾ ಸಂಕಷ್ಟದ ಸಮಯದಲ್ಲಿ ವಸ್ತುಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಬಾರದು: ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ವರ್ತಕರು ಕೊರೊನಾ ಸಂಕಷ್ಟದ ಸಮಯದಲ್ಲಿ ವಸ್ತುಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಬಾರದು: ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌
ಶ್ರೀನಿವಾಸಪುರ: ವರ್ತಕರು ಕೊರೊನಾ ಸಂಕಷ್ಟದ ಸಮಯದಲ್ಲಿ ವಸ್ತುಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಬಾರದು ಎಂದು ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಹೇಳಿದರು.  ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಏರ್ಪಡಿಸಿದ್ದ ವರ್ತಕರ ಸಭೆಯಲ್ಲಿ ಮಾತನಾಡಿ, ಕೊರೊನಾ ಸಮಾಜದ ಎಲ್ಲ ವರ್ಗದ ಜನರಿಗೂ ಸಂಕಷ್ಟ ತಂದಿದೆ. ಅದರಲ್ಲೂ ಬಡವರ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ವೈರಾಣು ಹರಡದಂತೆ ನೋಡಿಕೊಳ್ಳಬೇಕು. ಜನರು ಲಾಕ್‌ ಡೌನ್‌ ಕಡ್ಡಾಯವಾಗಿ ಪಾಲಿಸಬೇಕು. ಮನೆಯಿಂದ ಹೊರಗೆ ಬರಬಾರದು ಎಂದು ಹೇಳಿದರು.
  ಪಟ್ಟಣದಲ್ಲಿ ಪ್ರತಿ ದಿನ ಬೆಳಿಗ್ಗೆ 7 ರಿಂದ 10 ವರೆಗೆ ಅಗತ್ಯ ವಸ್ತುಗಳ ಮಾರಾಟಕ್ಕೆ ಅನುವು ಮಾಡಿಕೊಡಲಾಗಿದೆ. ಈ ಅವಧಿಯಲ್ಲಿ ಗ್ರಾಹಕರು ಸಾಮಾಜಿಕ ಅಂತರ ಪಾಲಿಸಬೇಕು. ವರ್ತಕರು ಈ ಬಗ್ಗೆ ಗ್ರಾಹಕರಿಗೆ ತಿಳಿಹೇಳಬೇಕು. ಪಟ್ಟಣದಲ್ಲಿ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು. ನೀರಿನ ಸಮಸ್ಯೆ ಇದರು ಕಡೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು ಎಂದು ಹೇಳಿದರು.
  
  ಆರ್ಯ ವೈಶ್ಯ ಸಂಘಟನೆಯ ಮುಖ್ಯಸ್ಥ ವೈ.ಆರ್‌.ಶಿವಪ್ರಕಾಶ್‌ ಮಾತನಾಡಿ, ಗ್ರಾಹಕರು ವರ್ತಕರೊಂದಿಗೆ ಸಹಕರಿಸಬೇಕು. ಪದಾರ್ಥಗಳನ್ನು ಖರೀದಿಸುವಾಗ ಗುಂಪುಗೂಡದೆ, ಸಾಮಾಜಿಕ ಅಂತರ ಪಾಲಿಸಬೇಕು. ನಿಯಮಾನುಸಾರ ವ್ಯಾಪಾರ ವಹಿವಾಟು ನಡೆಸಲಾಗುವುದು ಎಂದು ಹೇಳಿದರು.
  ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್‌, ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್, ಸರ್ಕಲ್‌ ಪೊಲೀಸ್‌ ಇನ್ಸ್‌ಪೆಕ್ಟರ್‌ ರಾಘವೇಂದ್ರ ಪ್ರಕಾಶ್‌, ಸಬ್‌ ಇನ್ಸ್‌ಪೆಕ್ಟರ್‌ಗಳಾದ ವಿಠ್ಠಲ್‌ ತಳವಾರ್‌, ವರಲಕ್ಷ್ಮಿ , ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ದಿಂಬಾಲ ಅಶೋಕ್‌, ತಾಲ್ಲೂಕು ವರ್ತಕರ ಸಂಘದ ಅಧ್ಯಕ್ಷ ಕೆ.ವಿ.ಸೂರ್ಯನಾರಾಯಣಶೆಟ್ಟಿ, ಕಾರ್ಯದರ್ಶಿ ಆದೆಪ್ಪಶೆಟ್ಟಿ ಇದ್ದರು.