ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಶ್ರೀನಿವಾಸಪುರ ವಿವಿಧ ರೈತ ಸಂಘಟನೆಗಳ ಕಾರ್ಯಕರ್ತರು ಎಪಿಎಂಸಿ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.
ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿ ಎದುರು ವಿವಿಧ ರೈತ ಸಂಘಟನೆಗಳ ಕಾರ್ಯಕರ್ತರು ಎಪಿಎಂಸಿ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಧರಣಿ ನಿರತ ರೈತರನ್ನು ಉದ್ದೇಶಿಸಿ ಮಾತನಾಡಿ, ದೇಶದಲ್ಲಿ ಕೊರೊನಾ ಸಂಕಷ್ಟ ಕಾಡುತ್ತಿದೆ. ಹಸಿವು, ನಿರುದ್ಯೋಗ ತಾಂಡವಾಡುತ್ತಿದೆ. ಇಂಥ ಸಂದರ್ಭದಲ್ಲಿ ಕೃಷಿಕ ಸಮಾಜಕ್ಕೆ ಆಸರೆಯಾಗಿ ನಿಲ್ಲುವ ಬದಲು, ಕಾರ್ಪೊರೇಟ್ ವಲಯಕ್ಕೆ ಲಾಭ ಮಾಡಿಕೊಡಲು ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ವೀರಭದ್ರಸ್ವಾಮಿ, ಕೆಪಿಆರ್ಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಪಾತಕೋಟ ನವೀನ್ ಕುಮಾರ್ ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಮಾತನಾಡಿದರು.
ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಹಶೀಲ್ದಾರ್ಗೆ ನಿಡಲಾಯಿತು.
ಮುಖಂಡರಾದ ಎನ್.ವೀರಪ್ಪರೆಡ್ಡಿ, ಎಸ್.ಎಂ.ನಾಗರಾಜ್, ಎನ್.ನಾಗಭೂಷಣ್, ಗುಂದೇಡು ನಾಗರಾಜ್, ನಂಜಪ್ಪ, ಆರ್.ವೆಂಕಟೇಶ್, ಬಿ.ನಾರಾಯಣಸ್ವಾಮಿ, ಎಂ.ಬೈರಾರೆಡ್ಡಿ, ಹೆಬ್ಬಟ ರಮೇಶ್, ದೇವರಾಜಗೌಡ, ಈರಪ್ಪರೆಡ್ಡಿ, ಎನ್.ಜಿ.ಶ್ರೀರಾಮರೆಡ್ಡಿ ಇದ್ದರು.