ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ, ಸಮಾಜ ಸೇವಾ ಸಂಸ್ಥೆಗಳು ಪ್ರತಿ ದಿನ ಬಡವರಿಗೆ ಆಹಾರದ ಪೊಟ್ಟಣಗಳನ್ನು ವಿತರಿಸುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ: ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್
ಶ್ರೀನಿವಾಸಪುರ: ಸಮಾಜ ಸೇವಾ ಸಂಸ್ಥೆಗಳು ಪ್ರತಿ ದಿನ ಬಡವರಿಗೆ ಆಹಾರದ ಪೊಟ್ಟಣಗಳನ್ನು ವಿತರಿಸುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಹೇಳಿದರು.
ಪಟ್ಟಣದಲ್ಲಿ ಸಾಮಾಜಿಕ ಹಕ್ಕುಗಳ ಹೋರಾಟ ಸಮಿತಿ ನೇತೃತ್ವದಲ್ಲಿ, ವರ್ತಕರ ಸಂಘದ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮಮದಲ್ಲಿ ಬಡವರಿಗೆ ಆಹಾರದ ಪೊಟ್ಟಣಗಳನ್ನು ವಿತರಿಸಿ ವಿತರಿಸಿ ಮಾತನಾಡಿ, ಕೊರೊನಾ ವೈರಾಣು ತಡೆಯಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು. ನಿಯಮಾನುಸಾರ ನಡೆದುಕೊಳ್ಳಬೇಕು ಎಂದು ಹೇಳಿದರು.
ಕೊರೊನಾ ತಡೆಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಾಗಿದೆ. ಸ್ಥಳೀಯ ಕವಿಗಳು ಬರೆದಿರುವ ಕೊರೊನಾ ಜಗೃತಿ ಗೀತೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗಿದೆ. ಪ್ರತಿಯೊಬ್ಬರೂ ಮನೆಯಲ್ಲಿಯೇ ಉಳಿದುಕೊಳ್ಳುವ ಮೂಲಕ ಕೋವ ಜಾಮೊ ತಪ್ಪಿಸಬೇಕು ಎಂದು ಹೇಳೀದರು.
ತಾಲ್ಲೂಕು ವರ್ತಕರ ಸಂಘದ ಅಧ್ಯಕ್ಷ ಕೆ.ವಿ.ಸೂರ್ಯನಾರಾಯಣಶೆಟ್ಟಿ, ಕಾರ್ಯದರ್ಶಿ ಆದೆಪ್ಪಶೆಟ್ಟಿ, ಮುಖಂಡರಾದ ಕೆಪಿಆರ್ಎಸ್ ಅದ್ಯಕ್ಷ ಪಿ.ಆರ್.ಸೂರ್ಯನಾರಾಯಣ, ತಾಲ್ಲೂಕು ಘಟಕದಅಧ್ಯಕ್ಷ ಪಾತಕೋಟ ನವೀನ್ ಕುಮಾರ್, ಡಾ. ಆರ್.ರವಿಕುಮಾರ್, ಮುಖಂಡರಾದ ಸುರೇಶ್ ಬಾಬು, ಶ್ರೀನಿವಾಸ್ ಇದ್ದರು.