ಶ್ರೀನಿವಾಸಪುರ ಸಾಮಾಜಿಕ ಅಂತರ ಹಾಗೂ ಮಾಸ್ಕ್‍ನ್ನು ಧರಿಸಿ ಸ್ವಾತಂತ್ರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುವುದು: ತಹಶೀಲ್ದಾರ್

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ, ಕೋವಿಡ್-19 ಹಿನ್ನಲೆಯಲ್ಲಿ ಈ ಭಾರಿ ಸಾಮಾಜಿಕ ಅಂತರ ಹಾಗೂ ಮಾಸ್ಕ್‍ನ್ನು ಧರಿಸಿ ಸ್ವಾತಂತ್ರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ತಿಳಿಸಿದರು.
ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ 74 ನೇ ವರ್ಷದ ಸ್ವಾತಂತ್ರನೇ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಎಸ್.ಎಂ.ಶ್ರೀನಿವಾಸ್ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್‍ನ್ನು ಹಾಕಿಕೊಂಡು ಬರಬೇಕು ಜೊತೆಗೆ ತಮ್ಮ ಕಛೇರಿಗಳಲ್ಲಿಯೇ ಧ್ವಜಾರೋಹಣವನ್ನು ನೆರವೇರಿಸಿ ಬೆಳಗ್ಗೆ 9 ಗಂಟೆಗೆ ತಾಲ್ಲೂಕು ತಹಶೀಲ್ದಾರ್ ಕಛೇರಿಗೆ ಆಗಮಿಸಬೇಕು ತದನಂತರ ಸರ್ಕಾರಿ ಬಾಲಕಿಯರ ಕಾಲೇಜು ಆವರಣದಲ್ಲಿ ಧ್ವಜಾರೋಹಣವನ್ನು ನೆರವೇರಿಸಲಾಗುವುದು ಎಂದರು.
ಈ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಎಲ್ಲಾ ಅಧಿಕಾರಿಗಳು ಹಾಜರಾಗಬೇಕು ಸ್ವಾತಂತ್ರ ದಿನಾಚರಣೆ ಪ್ರಯುಕ್ತ ತಮ್ಮ ತಮ್ಮ ಕಛೇರಿಗಳಿಗೆ ಒಂದು ದಿನದ ಮುಂಚೆಯೇ ವಿದ್ಯುತ್ ದೀಪಾಲಂಕಾರವನ್ನು ಮಾಡಿಕೊಳ್ಳತಕ್ಕದ್ದು, ಈ ಕಾರ್ಯಕ್ರಮದಲ್ಲಿ ಸ್ವಾತಂತ್ರಕ್ಕಾಗಿ ಹೋರಾಡಿದ ಮಹನೀಯರನ್ನು ಸನ್ಮಾನಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಎಸ್.ಆನಂದ್, ಪುರಸಭೆ ಮುಖ್ಯಾಧಿಕಾರಿ ಮೋಹನ್ ಕುಮಾರ್, ಸಿಪಿಐ ರಾಘವೇಂದ್ರ ಪ್ರಕಾಶ್, ಅಪ್ಪಿರೆಡ್ಡಿ, ಬಿಇಒ ಉಮಾದೇವಿ, ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.