ಶ್ರೀನಿವಾಸಪುರ: ಸಾರ್ವಜನಿಕರು ಅದಾಲತ್‌ ಪ್ರಯೋಜನ ಪಡೆದುಕೊಳ್ಳಬೇಕು : ಜಿಲ್ಲಾಧಿಕಾರಿ ಸತ್ಯಭಾಮ

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರ: ಸಾರ್ವಜನಿಕರು  ಅದಾಲತ್‌ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸತ್ಯಭಾಮ ಹೇಳಿದರು.
  ಪಟ್ಟಣದ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪಿಂಚಣಿ ಮತ್ತು ಕಂದಾಯ ಅದಾಲತ್‌ ಕಾರ್ಯಕ್ರಮದಲ್ಲಿ  ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಿಸಿ ಮಾತನಾಡಿ, ಹೋಬಳಿ ಮಟ್ಟದಲ್ಲಿ ಅದಾಲತ್‌ ನಡೆಸಿ ಮಂಜೂರಾತಿ ಪತ್ರ ವಿತರಿಸುತ್ತಿರುವುದರಿಂದ ಫಲಾನುಭವಿಗಳಿಗೆ ಹೆಚ್ಚಿನ ಅನುಕೂಲವಾಗಿದೆ ಎಂದು ಹೇಳಿದರು.ಕೊರೊನಾ ಬಗ್ಗೆ ಹಾಗೂ ಸಿಬ್ಬಂದಿಯ ಕಾರ್ಯನಿರ್ವಹಣೆ ಕುರಿತು ಹಗುರವಾಗಿ ಮಾತನಾಡುವುದು ಸರಿಯಲ್ಲ. ಸಮಸ್ಯೆ ಗಂಭೀರವಾಗಿದೆ ಎಂಬುದನ್ನು ಅರಿಯಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸದೆ ಸಂಚರಿಸಬಾರದು. ಅಂತರ ಪಾಲನೆ ಕಡ್ಡಾಯ. ನಿಯಮಿತವಾಗಿ ಕೈ ತೊಳೆಯುವುದನ್ನು ಮರೆಯಬಾರದು ಎಂದು ಹೇಳಿದರು.  ವಿವಿಧ ಯೋಜನೆಗಳ 66 ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಲಾಗಿದೆ. 266ಕ್ಕೂ ಹೆಚ್ಚಿನ ಸಂಖ್ಯೆಯ ಅರ್ಜಿಗಳು ಬಂದಿದ್ದು, ಅವುಗಳನ್ನು ಹಂತ ಹಂತವಾಗಿ ಪರಿಶೀಲಿಸಿ ಇತ್ಯರ್ಥ ಮಾಡಲಾಗುವುದು ಎಂದು ಹೇಳಿದರು.   ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌, ಉಪ ತಹಶೀಲ್ದಾರ್‌ ಮಲ್ಲೇಶ್‌, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಗುರುರಾಜ ರಾವ್‌, ಮುನಿವೆಂಕಟಪ್ಪ, ಹರಿ ಇದ್ದರು.