ಇಂದಿರಾ ಗಾಂಧಿ ಪುಣ್ಯತಿಥಿ ಹಾಗೂ ಸರ್ಧಾರ್ ಪಟೇಲ್ ಜನ್ಮದಿನಾಚರಣೆ.

JANANUDI.COM NETWORK 

ಇಂದಿರಾ ಗಾಂಧಿ ಪುಣ್ಯತಿಥಿ ಹಾಗೂ ಸರ್ಧಾರ್ ಪಟೇಲ್ ಜನ್ಮದಿನಾಚರಣೆ.

ಸ್ವತಂತ್ರ ಭಾರತದ ಇತಿಹಾಸದಲ್ಲಿ ಕ್ರಾಂತಿಕಾರಕವಾದ ಉಳುವವನೆ ಹೊಲದೊಡೆಯ ಕಾನೂನನ್ನು ಜಾರಿಗೊಳಿಸುವ ಮೂಲಕ ದೇಶದ ಕಟ್ಟ ಕಡೆಯ ಕೃಷಿಕಾರ್ಮಿಕನಿಗೆ ಭೂಮಿಯ ಹಕ್ಕನ್ನು ನೀಡುವ ಮೂಲಕ ಮತ್ತು ಶ್ರೀಮಂತ ವರ್ಗಕ್ಕಷ್ಟೆ ಸೀಮಿತವಾಗಿದ್ದ ಬ್ಯಾಂಕ್‌ಗಳನ್ನು ರಾಷ್ಟ್ರೀಕರಣದ ಮಾಡುವ ಮೂಲಕ ದೇಶದ ಸಾಮಾನ್ಯ ಜನತೆಗೆ ಬ್ಯಾಂಕಿನ ಸಾಲ ಮತ್ತಿತರ ಸೌಲಭ್ಯಗಳು ದೊರೆಯುವಂತಹ ವಾತಾವರಣ ನಿರ್ಮಸಿದ ಇಂದಿರಾಗಾಂಧಿ ಯವರು ದೇಶದ ಸಮಗ್ರತೆಗಾಗಿ ತಗೆದುಕೊಂಡ ನಿರ್ಧಾರ ಸಿಖ್ ಉಗ್ರಗಾಮಿಗಳ ವಿರುದ್ಧದ ಅಪರೇಷನ್ ಬ್ಲೂಸ್ಟಾರ್ ಕಾರ್ಯಾಚರಣೆ ಆಗಿತ್ತು. ಆದರೆ ದುರಾದೃಷ್ಟವಶಾತ್ ಅವರು ಅದೇ ಸಿಖ್ ಭಯೋತ್ಪಾದಕರ ಗುಂಡಿಗೆ ಬಲಿಯಾದದ್ದು ಸ್ವತಂತ್ರ ಭಾರತಕ್ಕಾದ ಬಹುದೊಡ್ಡ ನಷ್ಟ ಎಂದು ಕೆಎಫ್‌ಡಿಸಿ ಮಾಜಿ ಅಧ್ಯಕ್ಷ ಬಿ. ಹಿರಿಯಣ್ಣ ಹೇಳಿದರು.

ಅವರು ಇಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಛೇರಿ ‘ಇಂದಿರಾ ಪ್ರಿಯದರ್ಶಿನಿ’ ಇಲ್ಲಿ ನಡೆದ ಇಂದಿರಾ ಗಾಂಧಿ ಪುಣ್ಯತಿಥಿ ಮತ್ತು ಸರ್ಧಾರ್ ಪಟೇಲ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಜವಹರಲಾಲ್ ನೆಹರೂ ಸಂಪುಟದ ದೇಶದ ಮೊದಲ ಗೃಹ ಸಚಿವ, ಮಾಜಿ ಉಪ ಪ್ರದಾನಿ, ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರ ಸರ್ಧಾರ್ ವಲ್ಲಭಭಾಯಿ ಪಟೇಲರು ದೇಶದಾದ್ಯಂತ ಚಿಕ್ಕಚಿಕ್ಕ ರಾಜ್ಯಗಳಾಗಿ ಹಂಚಿ ಹೋಗಿದ್ದ ಐನೂರಕ್ಕೂ ಹೆಚ್ಚು ರಾಜ ಸಂಸ್ಥಾನಗಳ ಅರಸರ ಮನಒಲಿಸಿ ಈಗಿನ ಭಾರತ ನಿರ್ಮಿಸುವಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಚಾಚಾ ನೆಹರೂ ರವರ ಜೊತೆ ಸೇರಿ ಶ್ರಮಿಸಿದ್ದು ಅದು ಅವರು ಈ ದೇಶಕ್ಕೆ ನೀಡಿರುವ ಬಹುದೊಡ್ಡ ಕೊಡುಗೆ ಮತ್ತು ಅವರು ಗಾಂಧಿ ಹತ್ಯೆಯ ನಂತರ ಹಂತಕ ನಾಥೂರಾಮ್ ಘೋಡ್ಸೆಯ ಮಾತೃಸಂಸ್ಥೆ ಎನ್ನಲಾದ ಆರೆಸ್ಸೆಸ್ ಅನ್ನು ನಿಷೇಧಿಸಿದ್ದರು ಮತ್ತು ಆ ಮೂಲಕ ದೇಶದ ಭವಿಷ್ಯಕ್ಕೆ ಉಂಟಾಗಬಹುದಾದ ಅಪಾಯವನ್ನು ಅಂದೇ ಊಹಿಸಿದ್ದರು ಎಂದು ನಗರ ಪ್ರಾಧಿಕಾರದ ಮಾಜಿ ಅಧ್ಯಕ್ಷ ವಿಕಾಸ್ ಹೆಗ್ಡೆ ಹೇಳಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಹರಿಪ್ರಸಾದ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸಿಗ ಕೋಣಿ ಕೃಷ್ಣ ದೇವ ಕಾರಂತ, ಕಾಂಗ್ರೆಸ್ ಐ.ಟಿ ಸೆಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಪುರಸಭಾ ಸದಸ್ಯರಾದ ದೇವಕಿ ಸಣ್ಣಯ್ಯ, ಪ್ರಭಾವತಿ ಶೆಟ್ಟಿ, ಚಂದ್ರಶೇಖರ ಖಾರ್ವಿ, ಇಂಟಕ್ ಅಧ್ಯಕ್ಷ ಚಂದ್ರ ಅಮೀನ್, ಸೇವಾದಳದ ಅಧ್ಯಕ್ಷ ಕುಮಾರ ಖಾರ್ವಿ, ಪುರಸಭಾ ಮಾಜಿ ಅಧ್ಯಕ್ಷ ಹಾರೂನ್ ಸಾಹೇಬ್, ಮುಖಂಡರಾದ ಶಿವಾನಂದ ಕೆ., ವಿಠ್ಠಲ ಕಾಂಚನ್, ಧರ್ಮಪ್ರಕಾಶ್, ಅಬ್ದುಲ್ಲಾ ಕೋಡಿ, ಆಶಾ ಕರ್ವಾಲೋ, ಚಂದ್ರಕಾಂತ ಖಾರ್ವಿ, ಅಶ್ವಥ್ ಕುಮಾರ್, ಕೆ.ಪಿ ಅರುಣ್ ಪಟೇಲ್, ಅಶೋಕ್ ಸುವರ್ಣ, ಕೆ. ಶಿವಕುಮಾರ್, ಶಶಿರಾಜ್, ರೋಷನ್ ಶೆಟ್ಟಿ, ಮುನಾಫ್ ಕೋಡಿ, ಸುವರ್ಣ ಡಿ’ ಅಲ್ಮೇಡಾ, ಹೇಮಾ ಪೂಜಾರಿ, ಸೂರ್ಯನಾರಾಯಣ ಮುಂತಾದವರು ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿದರು. ಕೋಶಾಧಿಕಾರಿ ಕೋಣಿ ನಾರಾಯಣ ಆಚಾರ್ ವಂದಿಸಿದರು.