ಉಡುಪಿ ಜಿಲ್ಲಾ ಜಾನಪದ ಪರಿಷತ್ ಪದಗ್ರಹಣ ಸಮಾರಂಭ

JANANUDI.COM NETWORK


ಕೋಟ: ಜಾನಪದವು ಪಠ್ಯ ಪುಸ್ತಕವಾಗಿ ವಿದ್ಯಾರ್ಥಿಗಳು ಜಾನಪದವನ್ನು ಓದುವಂತಾಗಬೇಕು. ಆಗ ಜಾನಪದ ಕಲೆಯನ್ನು ಉಳಿಸಿ ಬೆಳೆಸಬಹುದು. ರಾಜ್ಯದಲ್ಲಿ ಜಾನಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸಿ ಅಲ್ಲಿ ದೊಡ್ಡ ದೊಡ್ಡ ಪದವಿ ಪಡೆದವರನ್ನು ಕುಲಸಚಿವ, ಪ್ರಾಧ್ಯಾಪಕರಾಗಿ ನೇಮಿಸದೇ ಜಾನಪದದಲ್ಲಿ ಅನುಭವವಿರುವಂತಹ ಗ್ರಾಮೀಣ ಪ್ರದೇಶದ ಜಾನಪದ ತಜ್ಞರನ್ನು ನೇಮಿಸಿ ಅವರ ಮೂಲಕ ಬೋಧಿಸುವ ವ್ಯವಸ್ಥೆಯಾಗಬೇಕು ಎಂದು ರಾಜ್ಯ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಬಾಲಾಜಿ ಹೇಳಿದರು.
ಅವರು ಶನಿವಾರ ಉಡುಪಿ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ, ಪದಾಧಿಕಾರಿಗಳಿಗೆ ಪದಗ್ರಹಣ ಮಾಡಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಡಾ.ಜಿ.ಶಂಕರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ ಶೆಟ್ಟಿ ವಹಿಸಿದ್ದರು. ಇದೇ ಸಂದರ್ಭದಲ್ಲಿ ಪ್ರಸಿದ್ಧ ರಂಗೋಲಿ ಕಲಾವಿದ ಸೂರ್ಯ ಪುರೋಹಿತ ಕಾರ್ಕಳ ಅವರನ್ನು ಸನ್ಮಾನಿಸಲಾಯಿತು.
ಹಿರಿಯ ವಿದ್ವಾಂಸ ಡಾ.ಕನರಾಡಿ ವಾದಿರಾಜ ಭಟ್, ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಯೋಜನಾಧಿಕಾರಿ ಡಾ.ಗಣನಾಥ ಎಕ್ಕಾರು, ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ, ಕನ್ನಡ ಜಾನಪದ ಪರಿಷತ್‍ನ ರಾಮನಗರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಕಾಂತಪ್ಪ ಕೆ.ಸಿ ಮುಖ್ಯ ಅತಿಥಿಗಳಾಗಿ ಆಗಮಿಸಿದರು.ಕನ್ನಡ ಜಾನಪದ ಪರಿಷತ್‍ನ ವಿಭಾಗೀಯ ಸಂಚಾಲಕಿ ಡಾ.ಭಾರತಿ ಮರವಂತೆ ಶುಭಸಂಶನೆಗೈದರು.
ಸಾಹಿತಿ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿದರು. ಉಡುಪಿ ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಗಣೇಶ ಗಂಗೊಳ್ಳಿ ಸ್ವಾಗತಿಸಿದರು. ಕೋಶಾಧಿಕಾರಿ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಸಖಾರಾಮ್ ಮಾಸ್ಟರ್ ಹಾವಂಜೆ ವಂದಿಸಿದರು.
ಚಿತ್ರ//19ಸಿಬಿ2//ರಾಜ್ಯ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಬಾಲಾಜಿ ಅವರು ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.