ಎಸ್.ಎಸ್.ಎಲ್.ಸಿ – ಕುಂದಾಪುರ ಸಂತ ಜೋಸೆಫ್ ಪ್ರೌಢ ಶಾಲೆಗೆ ಶೇಕಡ ನೂರು ಫಲಿತಾಂಶ
ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2019 ನೇ ಸಾಲಿನಲ್ಲಿ ನೆಡೆಸಿದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕುಂದಾಪುರ ಸಂತ ಜೋಸೆಫ್ ಪ್ರೌಢ ಶಾಲೆಯು ಶೇಕಡ ನೂರು ಫಲಿತಾಂಶ ಪಡೆದು ಸಾಧನೆ ಮಾಡಿದೆ.
ಪರೀಕ್ಷೆಗೆ ಹಾಜರಾದ 29 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತಿರ್ಣರಾಗಿದ್ದು, ಪುಸ್ಪ ಎಂಬ ವಿದ್ಯಾರ್ಥಿನಿ 582 ಅಂಕಗಳನ್ನು ಪಡೆದು, 92.12 ಶೇಕಡ ಪಡೆದು ಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ. 4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 8 ವಿದ್ಯಾರ್ಥಿಗಳು ಎರಡನೇ ಶ್ರೇಣಿಯಲ್ಲಿ ಉತಿರ್ಣಾಗಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಶಾಲೆಯ ಮುಖ್ಯೋಪಾಧ್ಯಾನಿ ಸಿಸ್ಟರ್ ವಾಯ್ಲೆಟ್ ತಾವ್ರೊ ವಿದ್ಯಾರ್ಥಿಗಳನ್ನು ಹಾಗೂ ಸಿಬಂದಿಯನ್ನು ಅಭಿನಂದಿಸಿದ್ದಾರೆ.
.