ಕರ್ನಾಟಕ ರಾಜ್ಯದ 2019 ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಇಂದು ಪ್ರಕಟಗೊಂಡಿದ್ದು ಹಾಸನ ಪ್ರಥಮ– ಯಾದಗಿರಿಗೆ ಕೊನೆಯ ಸ್ಥಾನ
ಕರ್ನಾಟಕ ರಾಜ್ಯದ 2019 ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಈ ಬಾರಿ ಪರೀಕ್ಷೆ ಬರೆದವರ ಪೈಕಿ ಶೇ.73.07 ಮಂದಿ ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 1.7 ರಷ್ಟು ಫಲಿತಾಂಶ ಏರಿಕೆಯಾಗಿದೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಛೇರಿಯಲ್ಲಿ ಈ ಮಾಹಿತಿ ನೀಡಿದ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಎಂದಿನಂತೆ ವಿದ್ಯಾರ್ಥಿನಿಯರೇ ಈ ಬಾರಿಯೂ ಮೇಲುಗೈ ಸಾಧಿಸಿದ್ದಾರೆ ಎಂದು ತಿಳಿಸಿದರು.
ಫಲಿತಾಂಶದಲ್ಲಿ ಹಾಸನ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದರೆ, ರಾಮನಗರ ಜಿಲ್ಲೆ ದ್ವಿತೀಯ ಹಾಗೂ ಬೆಂಗಳೂರು ಗ್ರಾಮಾಂತರ ತೃತೀಯ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆ ಫಲಿತಾಂಶದಲ್ಲಿ ಕಡೆಯ ಸ್ಥಾನದಲ್ಲಿದೆ. http://karresults.nic.in ಹಾಗೂ http://kseeb.kar.nic.in ವೆಬ್ ಸೈಟ್ ನಲ್ಲಿ ಮಧ್ಯಾಹ್ನ 1 ಗಂಟೆಯಿಂದ ಫಲಿತಾಂಶ ವೀಕ್ಷಿಸಬಹುದಾಗಿದ್ದು, ನಾಳೆ ಬೆಳಿಗ್ಗೆ ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.