ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ:ವಿದ್ಯಾರ್ಥಿ ಸರಕಾರ ಉದ್ಘಾಟನೆ

JANANUDI NETWORK

ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ:ವಿದ್ಯಾರ್ಥಿ ಸರಕಾರ ಉದ್ಘಾಟನೆ


ಕುಂದಾಪುರ:ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಮೂಲಕ ವಿದ್ಯಾರ್ಥಿಗಳು ಶಿಸ್ತು,ನಾಯಕತ್ವವನ್ನು ಬೆಳೆಸಿಕೊಳ್ಳಬೇಕು.ವಿದ್ಯಾರ್ಥಿಗಳಲ್ಲಿ ಆಡಳಿತ ಪಕ್ಷ, ವಿರೋಧ ಪಕ್ಷ, ಸ್ಪೀಕರ್ ಈ ಎಲ್ಲಾ ಕಲ್ಪನೆ ಮೂಡಿದಾಗ ಮುಂದೆ ಉತ್ತಮ ನಾಯಕತ್ವದಲ್ಲಿ ಒಳ್ಳೆಯ ನಾಗರಿಕರಾಗಿ ಬಾಳಬಹುದು ಎಂದು ಕುಂದಾಪುರ ವಲಯದ ಧರ್ಮಗುರು ಅತೀ ವಂ.ಫಾ.ಸ್ಟ್ಯಾನಿ ತಾವೋ ಹೇಳಿದರು.
ಅವರು ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ 2019-20ನೇ ಸಾಲಿನ ವಿದ್ಯಾರ್ಥಿ ಸರಕಾರ ಉದ್ಘಾಟಿಸಿ,ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ಅಸುಂತಾ ಲೋಬೊ ವಿದ್ಯಾರ್ಥಿ ಸರಕಾರಕ್ಕೆ ಪ್ರತಿಜ್ಞಾ ವಿಧಿ ಭೋದಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿ ಕೈಪಿಡಿ ಬಿಡುಗಡೆಗೊಳಿಸಲಾಯಿತು. ವೇದಿಕೆಯಲ್ಲಿ ವಿದ್ಯಾರ್ಥಿ ನಾಯಕ ಸುಹಾನ್,ಉಪನಾಯಕಿ ವೃದ್ಥಿ ಶೆಟ್ಟಿ,ಸ್ಪೀಕರ್ ಅನಿಶಾ ಪೂಜಾರಿ,ಕಾರ್ಯದರ್ಶಿ ಪ್ರೀತಿ,ವಿರೋಧ ಪಕ್ಷದ ನಾಯಕಿ ದೀಪ ಮೇಟಿ ಮೊದಲಾದವರು ಉಪಸ್ಥಿತರಿದ್ದರು.
ಶಿಕ್ಷಕ ಭಾಸ್ಕರ್ ಗಾಣಿಗ ಸ್ವಾಗತಿಸಿದರು. ಶಿಕ್ಷಕಿ ಸಿತ್ಮಾ ಡಿ ಸೋಜಾ ಸಹಕರಿಸಿದರು.ಸುಶೀಲಾ ಖಾರ್ವಿ ವಂದಿಸಿದರು.ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.