ಕೆದಿಂಜೆ ಶಾಲೆ : ಉಚಿತ ಸಮವಸ್ತ್ರ ಹಾಗೂ ಪ್ರತಿಭಾ ಪುರಸ್ಕಾರ ವಿತರಣೆ

 

ವರದಿ: ವಾಲ್ಟರ್ ಮೊಂತೇರೊ

 

ಕೆದಿಂಜೆ ಶಾಲೆ : ಉಚಿತ ಸಮವಸ್ತ್ರ ಹಾಗೂ ಪ್ರತಿಭಾ ಪುರಸ್ಕಾರ ವಿತರಣೆ

 

ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕೆದಿಂಜೆ ಕೆನರಾ ಬ್ಯಾಂಕ್ ವತಿಯಿಂದ ಬುಧವಾರ ಉಚಿತ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭವು ಜಿನ್ನಾ ವೆಂಕಣ್ಣ ಶೆಟ್ಟಿ ಸ್ಮಾರಕ ಶಾಲಾ ಸಭಾಭವನದಲ್ಲಿ ಜರಗಿತು.
ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ಕೆನರಾ ಬ್ಯಾಂಕ್ ರೀಜನಲ್ ಆಫೀಸ್‍ನ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಬಿ.ಪಿ.ನಂಜುಂಡಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಡುಪಿ ಕೆನರಾ ಬ್ಯಾಂಕ್ ರೀಜನಲ್ ಆಫೀಸ್‍ನ ಡಿವಿಜನಲ್ ಮ್ಯಾನೇಜರ್ ರಮೇಶ್ ಕೆ. ಪೈ, ಕೆದಿಂಜೆ ಯು. ಸುಬ್ಬಣ್ಣ ಕಾಮತ್ ಎಜ್ಯುಕೇಶನ್ ಟ್ರಸ್ಟ್‍ನ ಅಧ್ಯಕ್ಷ ಯು. ಶೇಷಗಿರಿ ಕಾಮತ್ ಹಾಗೂ ಶಾಲಾ ಆಡಳಿತ ಮಂಡಳಿಯ ಸದಸ್ಯ ಬಿ. ಸುರೇಶ್ ಕಾಮತ್ ಭಾಗವಹಿಸಿದ್ದರು. ವೇದಿಕೆಯಲ್ಲಿ ಕೆದಿಂಜೆ ಕೆನರಾ ಬ್ಯಾಂಕ್‍ನ ಹಿರಿಯ ಪ್ರಬಂಧಕ ಅಭಿಷೇಕ್ ಕುಮಾರ್ ಉಪಸ್ಥಿತಿತರಿದ್ದರು.
ಶಾಲಾ ನಿವೃತ್ತ ಮುಖ್ಯ ಶಿಕ್ಷಕ ಕೆ. ಅನಿಲ್ ಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಮುಖ್ಯ ಶಿಕ್ಷಕ ಪ್ರಥ್ವೀರಾಜ್ ಬಲ್ಲಾಳ್ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಹಶಿಕ್ಷಕಿ ರೇಖಾ ಪೈ ಸ್ವಾಗತಿಸಿದರು.
2018-19ನೇ ಸಾಲಿನಲ್ಲಿ 7ನೇ ತರಗತಿಯಲ್ಲಿ ಅತ್ಯಧಿಕ ಅಂಕಗಳಿಸಿದ ನಿಶ್ಮಿತ್, ಸ್ನೇಹಾ, ಅಮೃತೇಶ್ವರ ಮೂವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯ ಶ್ಯಾಮ್ ಶೆಟ್ಟಿ, ಶಾಲಾ ನಿವೃತ್ತ ಮುಖ್ಯ ಶಿಕ್ಷಕ ಎನ್. ಸುಧಾಕರ್ ರಾವ್, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿನೇಶ್ ಪೂಜಾರಿ ಬಿರೋಟ್ಟು, ಕಾರ್ಯದರ್ಶಿ ಸಂದೀಪ್ ವಿ. ಪೂಜಾರಿ ಅಬ್ಬನಡ್ಕ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರಿಣಿ ಸುಂದರ ಪೂಜಾರಿ, ಶಾಲಾ ಗೌರವ ಶಿಕ್ಷಕಿಯರಾದ ಮಮತಾ, ಜಯಲಕ್ಷ್ಮೀ, ರೇಶ್ಮಾ, ಚೇತನಾ ಹಾಗೂ ವಿದ್ಯಾರ್ಥಿ ವೃಂದದವರು ಮತ್ತು ಮಕ್ಕಳ ಪೋಷಕರು ಉಪಸ್ಥಿತಿತರಿದ್ದರು.