ಕೊರೋನಾ ಲಾಕ್‍ಡೌನ್ ಕಟ್ಟುನಿಟ್ಟಿನ ಕ್ರಮ- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಕೊರೋನಾ ಲಾಕ್‍ಡೌನ್ ಕಟ್ಟುನಿಟ್ಟಿನ ಕ್ರಮ- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ.
ಕೆಜಿಎಫ್ : ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ 
ಕೋವಿಡ್-19 ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಭಾರತ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರವು ಮೇ.3ರ ತನಕ ಲಾಕ್‍ಡೌನ್ ನಿಷೇದಾಜ್ಞೆಯನ್ನು ಜಾರಿಗೊಳಿಸಿದ್ದು, ಕೆಜಿಎಫ್ ಪೊಲೀಸ್ ಜಿಲ್ಲೆಯಾದ್ಯಂತ ಲಾಕ್‍ಡೌನ್‍ನ್ನು ವ್ಯವಸ್ಥಿತವಾಗಿ ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿರುತ್ತದೆಯೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ ಅವರು ತಿಳಿಸಿದ್ದಾರೆ.
ಅಲ್ಲದೆ, ಕಾನೂನು ಉಲ್ಲಂಘಿಸುವವರ ವಿರುದ್ದ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುತ್ತಿದೆ. ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಮಾರ್ಚ್ 24 ರಿಂದ ಇದುವರೆವಿಗೂ ಸರ್ಕಾರದ ಲಾಕ್‍ಡೌನ್ ನಿಷೇದಾಜ್ಞೆಯನ್ನು ಉಲ್ಲಂಘನೆ ಮಾಡಿರುವ 26 ಮಂದಿಯ ವಿರುದ್ದ ಕಲಂ 188 ಐಪಿಸಿ ಕಾಯ್ದೆಯಡಿಯಲ್ಲಿ 22 ಪ್ರಕರಣವನ್ನು ದಾಖಲಿಸಿದ್ದು, 466 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ 26 ಜನರನ್ನು ಬಂಧಿಸಲಾಗಿರುತ್ತದೆ.
ಮುಂದುವರೆದಂತೆ, ಇನ್ನು ಮುಂದೆಯೂ ಸಹ ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿನ ಎಲ್ಲಾ ನಾಗರೀಕರು ಜವಾಬ್ದಾರಿಯುತವಾಗಿ ನಡೆದುಕೊಂಡು, ಅನಾವಶ್ಯಕ ಓಡಾಟಕ್ಕೆ ಆಸ್ಪದ ನೀಡಬಾರದು, ವಿನಾಕಾರಣ ವಾಹನಗಳಲ್ಲಿ ಓಡಾಡುವವರ ವಿರುದ್ದ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುತ್ತಿದೆ. ಸಾರ್ವಜನಿಕರು ಸರ್ಕಾರದ ಆದೇಶಕ್ಕೆ ಬದ್ದರಾಗಿ ಮನೆಯಲ್ಲಿಯೇ ಇದ್ದು ಸುರಕ್ಷಿತರಾಗಿರಲು ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ ಅವರು ಕೋರಿದ್ದಾರೆ