ಕೋಲಾರದ ಸೈನಿಕ್‌ ಪಬ್ಲಿಕ್‌ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಕೋಲಾರದ ಸೈನಿಕ್‌ ಪಬ್ಲಿಕ್‌ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

 
ಕೋಲಾರ: ವಿದ್ಯಾರ್ಥಿಗಳು ಸಹ ಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೂರಕವಾದ ಚಟುವಟಿಕೆ ಕೈಗೊಳ್ಳಬೇಕು ಎಂದು ಸೈನಿಕ್‌ ಪಬ್ಲಿಕ್ ಸಾಲೆಯ ಕಾರ್ಯದರ್ಶಿ ವೈ.ಸಿ.ಮುನೇಗೌಡ ಹೇಳಿದರು.
  ಶಾಲೆಯ ಆವರಣದಲ್ಲಿ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಗುರುವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡಾಸಕ್ತಿ ವ್ಯಕ್ತಿಯನ್ನು ಸದಾ ಚಟುವಟಿಕೆಯಿಂದ ಇರುವಂತೆ ಮಾಡುತ್ತದೆ ಎಂದು ಹೇಳಿದರು.
  ಶಾಲೆಯ ಮುಖ್ಯ ಶಿಕ್ಷಕ ಪಿ.ಬಾಲಕೃಷ್ಣಪ್ಪ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವು ಸಮಾನ್ಯ. ಅವೆರಡನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಮೊದಲು ಉತ್ತಮ ಪ್ರದರ್ಶನ ನೀಡಲು ಪ್ರಯತ್ನಿಸಬೇಕು. ಉತ್ತಮ ಪ್ರಯತ್ನ ಗೆಲುವಿನ ಹಾದಿಯಲ್ಲಿ ಕರೆದೊಯ್ಯುತ್ತದೆ ಎಂಬುದನ್ನು ಮನಗಾಣಬೇಕು. ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲೆಗೆ ಹೆಸರು ತರಬೇಕು ಎಂದು ಹೇಳಿದರು.
  ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಎಸ್‌.ಚಿನ್ಮಯಿ ಹಾಗೂ 10ನೇ ತರಗತಿ ವಿದ್ಯಾರ್ಥಿ ಎಸ್‌.ಮೋಹಿತ್‌ ಕುಸ್ತಿ ಪಂದ್ಯದಲ್ಲಿ, 10ನೇ ತರಗತಿಯ ಜಿ.ವಿ.ಶ್ಯಾಮು ಕರಾಟೆ ಸ್ಪರ್ಧೆಯಲ್ಲಿ ಹಾಗೂ 8ನೇ ತರಗತಿ ವಿದ್ಯಾರ್ಥಿ ಸುನೀಲ್‌ ಕುಮಾರ್‌ ಜೂಡೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ ಎಂದು ಹೇಳಿದರು.
 ಶಾಲಾ ಟ್ರಸ್ಟಿಗಳಾದ ಸುನಿತಾ, ಶಾಂತಮ್ಮ, ಶಿಕ್ಷಕರಾದ ಸಿ.ಮಂಜುನಾಥ್‌, ಜಿ.ವಿ.ಮಂಜುನಾಥ್ ಇದ್ದರು.