ಕೋಲಾರ ಕೋವಿಡ್‍ನಿಂದ 5 ಜನ ಗುಣಮುಖರಾಗಿ ಬಿಡುಗಡೆ :ಸಂಸದರಾದ ಎಸ್.ಮುನಿಸ್ವಾಮಿ ಅವರು ಹಣ್ಣು ಹಂಪಲುಗಳನ್ನು ನೀಡಿ ಶುಭ ಹಾರೈಸಿದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

 

 

ಕೋಲಾರ ಕೋವಿಡ್‍ನಿಂದ 5 ಜನ ಗುಣಮುಖರಾಗಿ ಬಿಡುಗಡೆ :ಸಂಸದರಾದ ಎಸ್.ಮುನಿಸ್ವಾಮಿ ಅವರು ಹಣ್ಣು ಹಂಪಲುಗಳನ್ನು ನೀಡಿ ಶುಭ ಹಾರೈಸಿದರು.

 

 

 

ಕೋಲಾರ ; ಕೋವಿಡ್-19 ಪಾಸಿಟಿವ್ ಕಂಡುಬಂದು ಚಿಕಿತ್ಸೆ ಪಡೆಯುತ್ತಿದ್ದ ಕೋಲಾರ ಜಿಲ್ಲೆಯ ಮುಳಬಾಗಿಲಿನ ಐದು ಜನರು ಗುಣಮುಖರಾಗಿ ಇಂದು ಎಸ್.ಎನ್.ಆರ್. ಆಸ್ಪತ್ರೆಯಿಂದ ಬಿಡುಗಡೆಯಾದರು.

ಇವರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಬಕಾರಿ ಸಚಿವರಾದ ಹೆಚ್.ನಾಗೇಶ್ ಹಾಗೂ ಸಂಸದರಾದ ಎಸ್.ಮುನಿಸ್ವಾಮಿ ಅವರು ಹಣ್ಣು ಹಂಪಲುಗಳನ್ನು ನೀಡಿ ಶುಭ ಹಾರೈಸಿದರು.

ಸಚಿವರಾದ ಹೆಚ್.ನಾಗೇಶ್ ಅವರು ಮಾತನಾಡಿ ಜಿಲ್ಲೆಯಲ್ಲಿ ಪ್ರಥಮವಾಗಿ ಮುಳಬಾಗಿಲಿನ 5 ಜನರಿಗೆ ಕರೋನಾ ಪಾಸಿಟಿವ್ ಕಂಡುಬಂದಿತ್ತು. ಇವರು ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಕೋಲಾರ ಜಿಲ್ಲೆಗೆ ಆಗಮಿಸಿದ್ದರು. ಇವರಿಗೆ ಪಾಸಿಟಿವ್ ಬಂದ ತಕ್ಷಣ ಚಿಕಿತ್ಸೆಯನ್ನು ಪ್ರಾರಂಭಿಸಲಾಯಿತು. ಇವರ ಸ್ಲ್ಯಾಬ್‍ನ್ನು ಪರೀಕ್ಷಿಸಿ ನೆಗೆಟಿವ್ ಬಂದಿದ್ದರಿಂದ ಗುಣಮುಖರಾಗಿದ್ದು, ಇಂದು ಬಿಡುಗಡೆ ಮಾಡಲಾಗಿದೆ. ಕರೋನಾಗೆ ಯಾರು ಆತಂಕ ಪಡಬಾರದು. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು. ಜಿಲ್ಲೆಯಲ್ಲಿ 19 ಪ್ರಕರಣಗಳು ಕಂಡು ಬಂದಿದ್ದವು. ಇಂದು 5 ಜನ ಬಿಡುಗಡೆ ಆಗಿರುವುದರಿಂದ 14 ಪ್ರಕರಣಗಳಿವೆ. ಜಿಲ್ಲೆಯಲ್ಲಿ ಕಂಡು ಬರುವ ಎಲ್ಲಾ ಪ್ರಕರಣಗಳನ್ನು ಗುಣಮುಖಗೊಳಿಸಲಾಗುವುದು ಎಂದು ತಿಳಿಸಿದರು.

ಇಂದು ಪಿ-906, ಪಿ-906, ಪಿ-908, ಪಿ-909 ಮತ್ತು ಪಿ-910 ಪ್ರಕರಣಗಳು ಗುಣಮುಖರಾಗಿ ಬಿಡುಗಡೆ ಆದರು. ಈ ಸಂದರ್ಭದಲ್ಲಿ ಬಿಡುಗಡೆ ಆದವರಿಗೆ ಪುಷ್ಪ ಮಳೆ ಸುರಿಸಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸಿ.ಎಸ್.ವೆಂಕಟೇಶ್, ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಹೆಚ್.ವಿ.ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕಾರ್ತಿಕ್ ರೆಡ್ಡಿ, ಅಪರ ಜಿಲ್ಲಾಧಿಕಾರಿಗಳಾದ ಶಿವಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಾಹ್ನವಿ, ಉಪವಿಭಾಗಾಧಿಕಾರಿಗಳಾದ ಸೋಮಶೇಖರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ|| ವಿಜಯ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ನಾರಾಯಣಸ್ವಾಮಿ ಅವರು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು..