ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರ: ಜನರು ಕೊರೊನಾ ಹರಡದಂತೆ ನಿಯಮಗಳನ್ನು ತಪ್ಪದೆ ಪಾಲಿಸಬೇಕು. ವೈಯಕ್ತಿಕ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.
ಪಟ್ಟಣದಲ್ಲಿ ಪುರಸಭೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಕೊರೊನಾ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕರು ಜನ ದಟ್ಟಣೆ ಇರುವು ಕಡೆ ಅಂತರ ಪಾಲಿಸಬೇಕು. ಮನೆಯಿಂದ ಹೊರಬಂದ ಕೂಡಲೆ ಮಾಸ್ಕ್ ಧರಿಸಬೇಕು. ಸಾಬೂನಿನಿಂದ ಕೈ ತೊಳೆಯಬೇಕು. ಸ್ಯಾನಿಟೈಸರ್ ಬಳಸಬೇಕು ಎಂದು ಹೇಳಿದರು. ಪುರಸಭೆ ಮುಖ್ಯಾಧಿಕಾರಿ ವಿ.ಮೋನಹ್ ಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಕೊರೊನಾ ಹರಡದಂತೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಸಿಬ್ಬಂದಿ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸಲಾಯಿತು. ತಾಲ್ಲೂಕು ವೈದ್ಯಾಧಿಕಾರಿ ಡಾ. ಎಂ.ಸಿ.ವಿಜಯ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ಬಿಆರ್ಸಿ ವಸಂತ, ಸಿಆರ್ಪಿ ಅಮರನಾಥ್ ಅಧಿಕಾರಿಗಳಾದ ಕೆ.ಜಿ.ರಮೇಶ್, ಶೇಖರ್ ರೆಡ್ಡಿ, ನಾಗೇಶ್, ಜಿ.ವಿ.ಚಂದ್ರಪ್ಪ, ನಾರಾಯಣಸ್ವಾಮಿ ಇದ್ದರು.