ವರದಿ:ವಾಲ್ಟರ್ ಮೊಂತೇರೊ
ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಸ್ನೇಹ ಸಮ್ಮಿಲನ
ನಮ್ಮಂತಹ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವುದಲ್ಲಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಮಾದರಿ ಸಂಸ್ಥೆಯಾಗಿದೆ : ಕಾಸ್ರಬೈಲು ಸುರೇಶ್ ಪೂಜಾರಿ
ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ)ನ 19ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಅಬ್ಬನಡ್ಕದ ಕುಂಟಲಗುಂಡಿ ಬಳಿ ಹಚ್ಚ ಹಸುರಿನ ವನ ಸಿರಿ ಮಧ್ಯೆದಲ್ಲಿ ಸ್ನೇಹ ಸಮ್ಮಿಲನ ಕಾರ್ಯಕ್ರಮ ವಿಶಿಷ್ಟ ರೀತಿಯಲ್ಲಿ ಜರಗಿತು.
ಸಮಾರಂಭದಲ್ಲಿ ಸಂಘದ ಪೂರ್ವಾಧ್ಯಕ್ಷರಾದ ಕಾಸ್ರಬೈಲು ಸುರೇಶ್ ಪೂಜಾರಿಯವರು ಮಾತಾನಾಡಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಕಳೆದ 19 ವರ್ಷಗಳಲ್ಲಿ ನಡೆಸಿದ ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ, ಶೈಕ್ಷಣಿಕ, ಸಂಘಟನಾ ಕ್ಷೇತ್ರಗಳ ಸಾಧನೆ ಮಹತ್ತರವಾದುದು. ಬಡವರ, ದೀನದಲಿತರಿಗೆ, ಅನಾರೋಗ್ಯವಂತರಿಗೆ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸಹಾಯಹಸ್ತದಂತಹ ಕಾರ್ಯಕ್ರಮಗಳು, ನಮ್ಮಂತಹ ಯುವ ಪ್ರತಿಭೆಗಳನ್ನು ಪೆÇ್ರೀತ್ಸಾಹಿಸುವುದರಲ್ಲಿ ಮಾದರಿ ಸಂಸ್ಥೆಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ನಂದಳಿಕೆ ರಾಜೇಶ್ ಕೋಟ್ಯಾನ್, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯದರ್ಶಿ ಪ್ರಶಾಂತ್ ಪೂಜಾರಿ, ಉಪಾಧ್ಯಕ್ಷರಾದ ಹರೀಶ್ ಪೂಜಾರಿ, ಪೂವಾಧ್ಯಕ್ಷರಾದ ಆನಂದ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಸದಸ್ಯರಾದ ಕುಲಾಲ್, ಲೀಲಾ ಪೂಜಾರಿ, ಹರಿಣಿ ಪೂಜಾರಿ, ಸುನೀತಾ ಪಿಂಟೋ, ಹರಿಣಾಕ್ಷಿ ಪೂಜಾರಿ, ಪುಷ್ಪ ಕುಲಾಲ್, ಪ್ರೇಮಾ ಪೂಜಾರಿ, ವೀಣಾ ಪೂಜಾರಿ, ಆರತಿ ಕುಮಾರಿ ಮೊದಲಾದವರು ಉಪಸ್ಥಿತರಿದ್ದರು.