ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ :  ಪರಿಸರವನ್ನು “ಕೂಲ್” ಮಾಡಲು ಗಿಡ ನೆಡುವ ಕಾರ್ಯಕ್ರಮ

ವರದಿ: ವಾಲ್ಟರ್ ಮೊಂತೇರೊ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ :  ಪರಿಸರವನ್ನು “ಕೂಲ್” ಮಾಡಲು ಗಿಡ ನೆಡುವ ಕಾರ್ಯಕ್ರಮ


“ಏಪ್ರಿಲ್ ಫೂಲ್” ದಿನ “ಫೂಲ್” ಆಗ್ಬೇಡಿ ಬನ್ನಿ ಪರಿಸರವನ್ನು “ಕೂಲ್” ಮಾಡುವ….! ನಮ್ಮ ಪರಿಸರವನ್ನು ನಾವೆಲ್ಲರೂ ಜೊತೆ ಸೇರಿ ಉಳಿಸಬೇಕಾಗಿದೆ, ನಮ್ಮ ಪರಿಸರದ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಸದುದ್ದೇಶವನ್ನಿಟ್ಟುಕೊಂಡು ಜಿಲ್ಲಾ ಅತ್ಯುತ್ತಮ ಯುವ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.), ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಹಾಗೂ ನೆಹರು ಯುವ ಕೇಂದ್ರ ಉಡುಪಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಸಹಯೋಗದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ನ ಅಧ್ಯಕ್ಷ ರಾಜೇಶ್ ಕೋಟ್ಯಾನ್ ಗಿಡ ನೆಡುವ ಮೂಲಕ ವಿಶೇಷ ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಅಧ್ಯಕ್ಷ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ, ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ನ ಕೋಶಾಧಿಕಾರಿ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ ಮೊದಲಾದವರು ಉಪಸ್ಥಿತಿತರಿದ್ದರು.