ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ನನ್ನ ಮತ – ನನ್ನ ಸೆಲ್ಪಿ

ವರದಿ:ವಾಲ್ಟರ್ ಮೊಂತೇರೊ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ನನ್ನ ಮತ – ನನ್ನ ಸೆಲ್ಪಿ

ಒಂದಲ್ಲ ಒಂದು ರೀತಿ ವಿಶೇಷ ಕಾರ್ಯಕ್ರಮಗಳ ಮೂಲಕ ಸಾಮಾಜಿಕ ಕ್ಷೇತ್ರದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ವತಿಯಿಂದ ಮತದಾನ ಜಾಗೃತಿ ಕುರಿತು ಕರಪತ್ರ ಬಿಡುಗಡೆ, ಪ್ರತಿಜ್ಞಾ ವಿಧಿ ಬೋಧನೆ ನಡೆಸುವುದರ ಜೊತೆಗೆ ಲೋಕಸಭಾ ಚುನಾವಣೆಯ ದಿನದಂದು ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಸದಸ್ಯರು ಮತ್ತು ಅವರ ಮನೆಯವರು ಹೆಚ್ಚಿನ ಸಂಖ್ಯೆಯಲ್ಲಿ ಕಡ್ಡಾಯ ಮತದಾನ ಮಾಡಬೇಕೆನ್ನುವ ನಿಟ್ಟಿನಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ “ನನ್ನ ಮತ – ನನ್ನ ಸೆಲ್ಪಿ” ಸ್ಪರ್ಧೆಯನ್ನು ಆಯೋಜಿಸಿತು. ಈ ಸ್ಪರ್ಧೆಗೆ ಸಂಘದ ಸದಸ್ಯರು ಮತದಾನ ಮಾಡಿ ಸೆಲ್ಪಿ ತೆಗೆದು ಸಂಭ್ರಮಿಸಿದರು.
ಮತದಾನ ನಮ್ಮ ಹಕ್ಕು ಸರಿಯಾದ ನಾಯಕನ ಆಯ್ಕೆ ನಮ್ಮ ಕರ್ತವ್ಯ ಎನ್ನುವ ನಿಟ್ಟಿನಲ್ಲಿ ಆಯೋಜಿಸಿರುವ ಈ ಸ್ಪರ್ಧೆಗೆ ಶಾಯಿಯ ಕುರುಹು ಇರುವ ಬೆರಳಿನೊಂದಿಗೆ ಚೆಂದದ ಸೆಲ್ಪಿ ತೆಗೆದು ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ವಾಟ್ಸಪ್ ಗ್ರೂಪ್‍ಗೆ ಕಳುಹಿಸಿಕೊಟ್ಟರು.
ಹಲವಾರು ಅತ್ಯುತ್ತಮ ಸೆಲ್ಪಿ ಪೋಟೋಗಳು ಆಯ್ಕೆಯಾಗಿದ್ದು ಅಂತಿಮ ಸುತ್ತಿನ ಅತ್ಯುತ್ತಮ ಸೆಲ್ಪಿಗೆ ಸಂಘದ ಮುಂದಿನ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಗುವುದು ಎಂದು ಸಂಘದ ಅಧ್ಯಕ್ಷ ನಂದಳಿಕೆ ರಾಜೇಶ್ ಕೋಟ್ಯಾನ್ ತಿಳಿಸಿದ್ದಾರೆ.