ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸ್ವಚ್ಛತಾ ಬೀದಿ ಫಲಕ

JANANUDI NETWORK

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸ್ವಚ್ಛತಾ ಬೀದಿ ಫಲಕ


ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ, ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಹಯೋಗದಲ್ಲಿ ಸ್ವಚ್ಛ ಭಾರತ್ ಸಮ್ಮರ್ ಇಂಟರ್ನ್‍ಶಿಪ್ ಕಾರ್ಯಕ್ರಮದಡಿಯಲ್ಲಿ ಸ್ವಚ್ಛತಾ ಜಾಗೃತಿ ಮೂಡಿಸುವ ಬೀದಿ ಫಲಕಗಳ ಅನಾವರಣ ಮಾಡಲಾಯಿತು. ಫಲಕಗಳಲ್ಲಿ ಸ್ವಚ್ಛ ಪರಿಸರದಿಂದ ಆರೋಗ್ಯ ನಿರ್ಮಾಣ, ಗ್ರಾಮದ ಸ್ವಚ್ಛತೆಯಿಂದ ದೇಶದ ಸ್ವಚ್ಛತೆ, ಗಿಡವನ್ನು ನೆಡೋಣ-ಮರವಾಗಿ ಬೆಳೆಸೋಣ ಪರಸರ ಮಾಲಿನ್ಯವನ್ನು ತಡೆಯೋಣ, ನೆಲ-ಜಲದ ಸಂರಕ್ಷಣೆ ನಮ್ಮೆಲ್ಲರ ಹೊಣೆ ಅಂತರ್ಜಲ ಅಭಿವೃದ್ಧಿ ಪಡಿಸೋಣ, ಸ್ವಚ್ಛತೆ ಎಲ್ಲಿದೆಯೋ ಅಲ್ಲಿದೆ ಅರೋಗ್ಯ, ಒಂದು ಹೆಜ್ಜೆ ಸ್ವಚ್ಛತೆಯ ಕಡೆಗೆ ಮುಂತಾದ ಸ್ವಚ್ಛತಾ ಸಂದೇಶ ಸಾರುವ ಬೀದಿ ಫಲಕವನ್ನು ಅಬ್ಬನಡ್ಕ-ಕುಂಟಲಗುಂಡಿ ರಸ್ತೆ ಬಳಿ ಆಳವಡಿಸಲಾಯಿತು.
ಈ ಸಂದರ್ಭದಲ್ಲಿ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ರಾಜೇಶ್ ಕೋಟ್ಯಾನ್,
ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯಕ್ರಮದ ನಿರ್ದೇಶಕ ಅಬ್ಬನಡ್ಕ ಸತೀಶ್ ಪೂಜಾರಿ, ನಿಕಟ ಪೂವಾಧ್ಯಕ್ಷ ಕಾಸ್ರಬೈಲು ಸುರೇಶ್ ಪೂಜಾರಿ, ಕಾರ್ಯದರ್ಶಿ ಪ್ರಶಾಂತ್ ಪೂಜಾರಿ, ಬಾಲಕೃಷ್ಣ ಮಡಿವಾಳ, ವಿಧಿನ್ ಶೆಟ್ಟಿ ಮೊದಲಾದವರಿದ್ದರು.