ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸ್ವಚ್ಛತೆ ಮತ್ತು ಆರೋಗ್ಯದ ಕುರಿತಾಗಿ ಮಾಹಿತಿ ಕಾರ್ಯಾಗಾರ

ವರದಿ: ವಾಲ್ಟರ್ ಮೊಂತೇರೊ

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸ್ವಚ್ಛತೆ ಮತ್ತು ಆರೋಗ್ಯದ ಕುರಿತಾಗಿ ಮಾಹಿತಿ ಕಾರ್ಯಾಗಾರ

ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ, ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಹಯೋಗದಲ್ಲಿ ಸ್ವಚ್ಛ ಭಾರತ್ ಸಮ್ಮರ್ ಇಂಟರ್ನ್‍ಶಿಪ್ ಕಾರ್ಯಕ್ರಮದಡಿಯಲ್ಲಿ ಸ್ವಚ್ಛತೆ ಮತ್ತು ಆರೋಗ್ಯದ ಕುರಿತಾಗಿ ಜಯಶ್ರೀ ಪ್ರಕಾಶ್ ಪೂಜಾರಿ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ರಾಜೇಶ್ ಕೋಟ್ಯಾನ್,
ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯಕ್ರಮದ ನಿರ್ದೇಶಕ ಅಬ್ಬನಡ್ಕ ಸತೀಶ್ ಪೂಜಾರಿ, ನಿಕಟ ಪೂವಾಧ್ಯಕ್ಷ ಕಾಸ್ರಬೈಲು ಸುರೇಶ್ ಪೂಜಾರಿ, ಉಪಾಧ್ಯಕ್ಷ ಹರೀಶ್ ಪೂಜಾರಿ, ಕಾರ್ಯದರ್ಶಿ ಪ್ರಶಾಂತ್ ಪೂಜಾರಿ, ಬಾಲಕೃಷ್ಣ ಮಡಿವಾಳ, ಸಂಧ್ಯಾ ಶೆಟ್ಟಿ, ಲಲಿತಾ ಆಚಾರ್ಯ, ಲೀಲಾ ಪೂಜಾರಿ ಮೊದಲಾದವರಿದ್ದರು.