ವರದಿ: ವಾಲ್ಟರ್ ಮೊಂತೇರೊ
ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಉಡುಪಿ ನೆಹರೂ ಇಲಾಖೆಯ ಜಿಲ್ಲಾ ಸಮಾನ್ವಧಿಕಾರಿ ವಿಲ್ಫ್ರೆಡ್ ಡಿಸೋಜಾರಿಗೆ ಸನ್ಮಾನ
ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರೂ ಯುವ ಕೇಂದ್ರ ಉಡುಪಿ ನೇತೃತ್ವದಲ್ಲಿ ಜರಗುತ್ತಿರುವ ರಾಷ್ಟ್ರೀಯ ಯುವ ಸೇವಕರ ತರಬೇತಿ ಕಾರ್ಯಾಗಾರದ ಅಂಗವಾಗಿ ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ಗೆ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಉಡುಪಿ ನೆಹರೂ ಯುವ ಕೇಂದ್ರದ ಸಮನ್ವಯಾಧಿಕಾರಿ ವಿಲ್ಪ್ರೆಡ್ ಡಿಸೋಜಾರವರಿಗೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.
ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಅಬ್ಬನಡ್ಕ ಸತೀಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉಡುಪಿ ನೆಹರೂ ಯುವ ಕೇಂದ್ರದ ಲೆಕ್ಕಾಧಿಕಾರಿ ವಿಷ್ಣು ಮೂರ್ತಿ, ಇಲಾಖೆಯ ಸಿಬ್ಬಂದಿಗಳಾದ ನಾರಾಯಣ, ಉದಯ ಮರಾಠಿ, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಗೌರವಾಧ್ಯಕ್ಷ ಕುಂಟಲಗುಂಡಿ ರಾಜು ಶೆಟ್ಟಿ ಮೊದಲಾದವರಿದ್ದರು.
ಈ ಸಂದರ್ಭದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯದರ್ಶಿ ಪ್ರಶಾಂತ್ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ವೀಣಾ ಪೂಜಾರಿ, ಕೋಶಾಧಿಕಾರಿ ಹರಿಪ್ರಸಾದ್ ಆಚಾರ್ಯ ಅಬ್ಬನಡ್ಕ, ಸ್ಥಾಪಕಾಧ್ಯಕ್ಷ ವಿಠಲ ಮೂಲ್ಯ, ನಿಕಟ ಪೂರ್ವಾಧ್ಯಕ್ಷ ರಾಜೇಶ್ ಕೋಟ್ಯಾನ್, ಆನಂದ ಪೂಜಾರಿ, ದಿನೇಶ್ ಪೂಜಾರಿ ಬಿರೋಟ್ಟು, ಜೊತೆ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಸದಸ್ಯರಾದ ಸುರೇಶ್ ಪೂಜಾರಿ ಅಬ್ಬನಡ್ಕ, ಲಲಿತಾ ಆಚಾರ್ಯ, ಹರಿಣಿ ಪೂಜಾರಿ, ಪದ್ಮಶ್ರೀ ಪೂಜಾರಿ, ಆರತಿ ಕುಮಾರಿ, ಸುಲೋಚನಾ ಕೋಟ್ಯಾನ್, ಅಶ್ವಿನಿ ಪ್ರಭಾಕರ್, ಸುನಿತಾ ಪಿಂಟೋ, ಯಶವಂತ ಕುಲಾಲ್, ಸುನಿಲ್ ಕುಲಾಲ್ ಮೊದಲಾದವರಿದ್ದರು.