ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ಗೆ ನೆಹರೂ ಯುವ ಕೇಂದ್ರದ ರಾಜ್ಯ ಯುವ ನಿಯೋಗ ಭೇಟಿ

ವರದಿ: ವಾಲ್ಟರ್ ಮೊಂತೇರೊ

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ಗೆ ನೆಹರೂ ಯುವ ಕೇಂದ್ರದ ರಾಜ್ಯ ಯುವ ನಿಯೋಗ ಭೇಟಿ

ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರೂ ಯುವ ಕೇಂದ್ರ ಉಡುಪಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯದ ಹಾಸನ, ಮಂಡ್ಯ, ಕೊಡಗು, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಯ 70 ಕ್ಕೂ ಅಧಿಕ ಯುವ ಕಾರ್ಯಕರ್ತರನ್ನೊಳಗೊಂಡ ನೆಹರೂ ಯುವ ಕೇಂದ್ರದ ರಾಜ್ಯ ಯುವ ನಿಯೋಗವು ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ಗೆ ಬುಧವಾರ ಭೇಟಿ ನೀಡಿತು.
ಉಡುಪಿ ನೆಹರೂ ಯುವ ಕೇಂದ್ರದ ಸಮನ್ವಯಾಧಿಕಾರಿ ವಿಲ್ಪ್ರೆಡ್ ಡಿಸೋಜಾ ಮಾತನಾಡಿ ಇಪ್ಪತ್ತು ವರ್ಷಗಳ ಸುದೀರ್ಘ ಇತಿಹಾಸವಿರುವ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಹೆಸರು ಹೇಳಲು ನನಗೆ ಅತ್ಯಂತ ಹೆಮ್ಮೆ ಎನಿಸುತ್ತಿದೆ. ಉಡುಪಿ ಜಿಲ್ಲೆಯಲ್ಲೇ ಅತ್ಯಂತ ಕ್ರೀಯಾಶೀಲ ಸಂಘಟನೆ, ಅವರು ನಿರಂತರ ನಡೆಸಿಕೊಂಡು ಬರುತ್ತಿರುವ ನೂರಾರು ಸಮಾಜಮುಖಿ ಕಾರ್ಯಗಳಿಂದ ಉಡುಪಿ ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪಡೆದಿದ್ದಾರೆ. ಪ್ರಸುತ್ತ ಈ ಬಾರಿಯೂ ಯುವಕರ ತಂಡವು ನಿಸ್ವಾರ್ಥವಾಗಿ ಹಾಗೂ ಸಮರ್ಪಕವಾಗಿ ಬಹಳಷ್ಟು ಶ್ರಮವಹಿಸಿ ಸ್ವಚ್ಛತಾ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡು ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವುದು ಅವರ ಸಂಸ್ಥೆಯ ಸಾಧನೆಗೆ ಸಂದ ಗೌರವ ಎಂದರು.
ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಅಬ್ಬನಡ್ಕ ಸತೀಶ್ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿದವರು ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಸದಸ್ಯರಲ್ಲಿರುವ ಒಗ್ಗಟ್ಟು ನಾನಾ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುಲು ಸಾಧ್ಯವಾಗಿದೆ ಎಂದರು.
ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಜೊತೆ ಕರ್ನಾಟಕ ರಾಜ್ಯದ ಏಳು ಜಿಲ್ಲೆಗಳಿಂದ ಆಗಮಿಸಿದ ಇಲಾಖೆಯ ರಾಜ್ಯ ಯುವ ನಿಯೋಗದೊಂದಿಗೆ ಇಂದಿನ ಸಮಾಜದಲ್ಲಿ ಯುವಕ ಸಂಘಗಳ ಪಾತ್ರ ಮತ್ತು ಬೆಳವಣಿಗೆ ಕುರಿತಾಗಿ ಸುಮಾರು ಎರಡು ಗಂಟೆಗಳ ಕಾಲ ಸಂವಾದ ಕಾರ್ಯಕ್ರಮ ಜರಗಿತು.
ವೇದಿಕೆಯಲ್ಲಿ ಉಡುಪಿ ನೆಹರೂ ಯುವ ಕೇಂದ್ರದ ಲೆಕ್ಕಾಧಿಕಾರಿ ವಿಷ್ಣು ಮೂರ್ತಿ, ಇಲಾಖೆಯ ಸಿಬ್ಬಂದಿಗಳಾದ ನಾರಾಯಣ, ಉದಯ ಮರಾಠಿ, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಗೌರವಾಧ್ಯಕ್ಷ ಕುಂಟಲಗುಂಡಿ ರಾಜು ಶೆಟ್ಟಿ ಮೊದಲಾದವರಿದ್ದರು.
ಸಂಘದ ಅಧ್ಯಕ್ಷರಾದ ಸತೀಶ್ ಪೂಜಾರಿ ಸ್ವಾಗತಿಸಿದರು. ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಪ್ರಶಾಂತ್ ಪೂಜಾರಿ ವರದಿ ವಾಚಿಸಿದರು. ಮಹಿಳಾ ಸದಸ್ಯೆ ಸುಲೋಚನಾ ಕೋಟ್ಯಾನ್ ಪ್ರಾರ್ಥನೆಗೈದರು. ಮಹಿಳಾ ಸಂಘಟನಾ ಕಾರ್ಯದರ್ಶಿ ವೀಣಾ ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೋಶಾಧಿಕಾರಿ ಹರಿಪ್ರಸಾದ್ ಆಚಾರ್ಯ ಅಬ್ಬನಡ್ಕ ವಂದಿಸಿದರು.
ಕಾರ್ಯಕ್ರಮದಲ್ಲಿ ಸ್ಥಾಪಕಾಧ್ಯಕ್ಷ ವಿಠಲ ಮೂಲ್ಯ, ನಿಕಟ ಪೂರ್ವಾಧ್ಯಕ್ಷ ರಾಜೇಶ್ ಕೋಟ್ಯಾನ್, ಆನಂದ ಪೂಜಾರಿ, ದಿನೇಶ್ ಪೂಜಾರಿ ಬಿರೋಟ್ಟು, ಜೊತೆ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಸದಸ್ಯರಾದ ಸುರೇಶ್ ಪೂಜಾರಿ ಅಬ್ಬನಡ್ಕ, ಲಲಿತಾ ಆಚಾರ್ಯ, ಹರಿಣಿ ಪೂಜಾರಿ, ಪದ್ಮಶ್ರೀ ಪೂಜಾರಿ, ಆರತಿ ಕುಮಾರಿ, ಸುಲೋಚನಾ ಕೋಟ್ಯಾನ್, ಅಶ್ವಿನಿ ಪ್ರಭಾಕರ್, ಸುನಿತಾ ಪಿಂಟೋ, ಯಶವಂತ ಕುಲಾಲ್, ಸುನಿಲ್ ಕುಲಾಲ್ ಮೊದಲಾದವರಿದ್ದರು.