ಪಿಯು ಪರೀಕ್ಷೆ ಇಂದಿನಿಂದ ಆರಂಭಗೊಂಡಿದೆ
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭಗೊಂಡಿವೆ. ಸರಕಾರ, ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸಕಲ ಕ್ರಮಗಳನ್ನು ತೆಗೆದುಕೊಂಡಿದೆ. ಇವತ್ತಿನಿಂದ ಆರಂಭವಾಗುವ ಪರೀಕ್ಷೆಗಳು ಮಾರ್ಚ್ 18ರವರೆಗೆ ನಡೆಯಲಿವೆ.
ಈ ಬಾರಿ ಒಟ್ಟು 6,73,606 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಇವರಲ್ಲಿ 3,38,868 ಮಂದಿ ಬಾಲಕರು ಹಾಗೂ 3,34,738 ಬಾಲಕಿಯರು ಇದ್ದಾರೆ. 1013 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ.
ವಿದ್ಯಾರ್ಥಿಗಳು ಉಚಿತ ಬಸ್ ವ್ಯವಸ್ಥೆ
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿಯಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಹಾಲ್ ಟಿಕೆಟ್ ತೋರಿಸುವ ಮೂಲಕ ಸರ್ಕಾರಿ ಬಸ್ಸುಗಳನ್ನು ಉಚಿತವಾಗಿ ಹೋಗಬಹುದು.
ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಪರೀಕ್ಷಾ ಕೇಂದ್ರದಿಂದ 200 ಮೀಟರ್ ಸುತ್ತಮುತ್ತ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಹಾಗೂ ಕೇಂದ್ರದ ಸಮೀಪದ ಎಲ್ಲ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಇರಿಸುವ ಸ್ಟ್ರಾಂಗ್ ರೂಮ್ಗಳಿಗೆ 24X7 ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಹಾಗೂ ಉತ್ತರ ಪತ್ರಿಕೆ ಸಾಗಿಸುವ ವಾಹನಗಳಿಗೆ ಜಿಪಿಆರ್ಎಸ್ ಅಳವಡಿಕೆ ಮಾಡಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಯಾರಾದರೂ ಹಂಚುತ್ತಿರುವುದು ಕಂಡುಬಂದಲ್ಲಿ ಅಂತಹವರನ್ನು ಕೂಡಲೇ ಬಂಧಿಸುವ ಆದೇಶ ಮಾಡಲಾಗಿದೆ.