ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಕೋಲಾರ:- ಜಿಲ್ಲೆಯ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ವಕ್ತಾರರಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ವಿಷಯಗಳ ಕುರಿತು ಅತ್ಯಂತ ಉತ್ತಮ ಸ್ಪಂದನೆ ನೀಡುವ ಮೂಲಕ ಹೆಸರು ಗಳಿಸಿರುವ ನೀವು ಪಕ್ಷದ ಸಂಘಟನೆಗೆ ವಕ್ತಾರರಾಗಿ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.
ಮಾಧ್ಯಮಗಳ ಮೂಲಕ ತಮ್ಮ ವಿಚಾರ, ದೃಷ್ಟಿಕೋನ ಪರಿಣಾಮಗಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅವಶ್ಯವಾಗಿದ್ದು, ತಮ್ಮ ಅನುಭವ, ಸಮರ್ಥವಾಗಿ ವಿಷಯ ಮಂಡನೆಯ ಸಾಮಥ್ರ್ಯ ಗಮನಿಸಿ ನಿಮ್ಮನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಿಸಿದ್ದು, ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ಮುಖ್ಯಸ್ಥರು ನೀಡುವ ಸಲಹೆ, ಸೂಚನೆ ಹಾಗೂ ಮಾರ್ಗದರ್ಶನಗಳ ಮೇಲೆ ತಕ್ಷಣ ಕಾರ್ಯಪ್ರವೃತ್ತರಾಗಲು ಅವರು ಕೋರಿದ್ದಾರೆ.