ಬೀಜಾಡಿ: ಗ್ರಾಮ ನೈರ್ಮಲ್ಯ ಅರಿವು ಕಾರ್ಯಾಗಾರ ಉದ್ಘಾಟನೆ

JANANUDI.COM NETWORK


ಬೀಜಾಡಿ: ಪ್ರತಿಯೊಂದು ಊರಿನಲ್ಲಿ ಶೌಚಾಲಯವಿದ್ದರೆ ಆ ಹಳ್ಳಿ ಸ್ವಚ್ಛ,ಸುಂದರ, ಆರೋಗ್ಯಕರ ಹಳ್ಳಿಯಾಗಿ ಗುರುತಿಸಿಕೊಳ್ಳಲಿದೆ. ಮನೆಯಲ್ಲಿ ಶೌಚಾಲಯವಿದ್ದರೆ ಆ ಮನೆಯ ಕುಟುಂಬ ಸಂತೋಷದಿಂದ ಜೀವನ ನಡೆಸಬಹುದಾಗಿದೆ ಎಂದು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‍ನ (ನಬಾರ್ಡ್) ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ಉಪ ಮಹಾಪ್ರಬಂಧಕಿ ಸಂಗೀತಾ ಎಸ್.ಕರ್ತಾ ಹೇಳಿದರು.
ಅವರು ಗುರುವಾರ ಬೀಜಾಡಿ ಮಿತ್ರಸೌಧದಲ್ಲಿ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ನಬಾರ್ಡ್) ಬೆಂಗಳೂರು, ಉಡುಪಿ ಜಿಲ್ಲಾ ಪಂಚಾಯಿತಿ ಸ್ವಚ್ಛ ಭಾರತ್ ಮಿಷನ್, ಬೀಜಾಡಿ ಗ್ರಾಮ ಪಂಚಾಯಿತಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಬೀಜಾಡಿ ಗೋಪಾಡಿ ಮಿತ್ರ ಸಂಗಮ, ರೋಟರಿ ಸಮುದಾಯದ ದಳ ಬೀಜಾಡಿ ಇವರ ಆಶ್ರಯದಲ್ಲಿ ನಡೆದ ಗ್ರಾಮ ನೈರ್ಮಲ್ಯ ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸರಕಾರದಿಂದ ಶೌಚಾಲಯವನ್ನು ನಿರ್ಮಿಸಲು ಸಹಾಯಧನ ನೀಡಲಾಗುತ್ತಿದ್ದು, ಈ ಬಗ್ಗೆ ಸ್ಥಳೀಯ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಿ. ನಬಾರ್ಡ್ ಅಭಿವೃದ್ಧಿಗಾಗಿ ನೈರ್ಮಲ್ಯ ಎನ್ನುವ ಸ್ವಚ್ಛತಾ ಅಭಿಯಾನ ಮಾಡುತ್ತಿದ್ದು, ಈ ಅಭಿಯಾನಕ್ಕೆ ಸಾರ್ವಜನಿಕರ ಸಹಾಕರ ಅಗತ್ಯ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಬೀಜಾಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಿ.ವಾದಿರಾಜ್ ಹೆಬ್ಬಾರ್ ವಹಿಸಿದ್ದರು. ಬೀಜಾಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಣೇಶ್, ಬಳ್ಕೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೀಪ ಗ್ರಾಮ ನೈರ್ಮಲ್ಯದ ಬಗ್ಗೆ ಮಾಹಿತಿ ನೀಡಿದರು.
ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್‍ನ ಮುಖ್ಯ ವ್ಯವಸ್ಥಾಪಕ ಮನೋಹರ್ ಕಟ್ಗೇರಿ ಶುಭ ಹಾರೈಸಿದರು.ಭಾರತೀಯ ವಿಕಾಸ ಟ್ರಸ್ಟ್‍ನ ಯೋಜನಾ ವ್ಯವಸ್ಥಾಪಕ ಅರುಣ್ ಪಟವರ್ಧನ್, ರೋಟರಿ ಸಮುದಾಯ ದಳದ ಅಧ್ಯಕ್ಷ ಗಿರೀಶ್ ಕೆ.ಎಸ್, ಮಿತ್ರ ಸಂಗಮದ ಕಾರ್ಯದರ್ಶಿ ಚಂದ್ರ ಬಿ.ಎನ್ ಉಪಸ್ಥಿತರಿದ್ದರು.
ಮಿತ್ರ ಸಂಗಮದ ಅಧ್ಯಕ್ಷ ಮಂಜುನಾಥ ಬೀಜಾಡಿ ಸ್ವಾಗತಿಸಿದರು. ಭಾರತೀಯ ವಿಕಾಸ ಟ್ರಸ್ಟ್‍ನ ಕಾರ್ಯಕ್ರಮ ಸಂಯೋಜಕ ರಾಘವೇಂದ್ರ ಆಚಾರ್ಯ ವಂದಿಸಿದರು. ಪತ್ರಕರ್ತ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.
ಚಿತ್ರ//05ಸಿಬಿ1//ಗುರುವಾರ ಬೀಜಾಡಿ ಮಿತ್ರಸೌಧದಲ್ಲಿ ಗ್ರಾಮ ನೈರ್ಮಲ್ಯ ಅರಿವು ಕಾರ್ಯಾಗಾರವನ್ನು ನಬಾರ್ಡ್‍ಯ ಸಂಸ್ಥೆಯ ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ಉಪ ಮಹಾಪ್ರಭಂದಕಿ ಸಂಗೀತಾ ಎಸ್.ಕರ್ತಾ ಉದ್ಘಾಟಿಸಿ ಮಾತನಾಡಿದರು.