ಮೂಡ್ಲಕಟ್ಟೆ ಎಂ ಐ ಟಿ: ತಾಂತ್ರಿಕ ಕಾರ್ಯಾಗಾರ

JANANUDI.COM NETWORK

ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ” ಡೆವಲಪ್ಮೆಂಟ್ ಆಫ್ ಸಿಗ್ನಲ್ಸ್ ಆಂಡ್ ಸಿಸ್ಟಮ್ಸ್ ಯುಸಿಂಗ್ ಮ್ಯಾಟ್ ಲ್ಯಾಬ್” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ನಿಟ್ಟೆ ವಿಶ್ವವಿದ್ಯಾಲಯದ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಡಾ| ಉಷಾ ದೆಸಾಯಿ ರವರು ಆಗಮಿಸಿದ್ದರು.
ಡಾ| ಉಷಾ ದೆಸಾಯಿ ರವರು ಕಾರ್ಯಾಗಾರವನ್ನು ಉದ್ಘಾಟಿಸಿ ನಮ್ಮ ದಿನ ನಿತ್ಯದ ಜೀವನದಲ್ಲಿ ಸಿಗ್ನಲ್ಸ್ ಹೇಗೆ ಅವಿಭಾಜ್ಯ ಅಂಗವಾಗಿದೆ ಎಂದು ವಿವರಿಸಿದರು. ಪಠ್ಯದ ಜೊತೆಗೆ ಅದಕ್ಕೆ ಪೂರಕವಾದ ಇಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರರಾವ್ ಮದಾನೆ ರವರು ಮಾತನಾಡಿ ಕಾರ್ಯಾಗಾರ ಸಂಯೋಜಕರನ್ನು ಅಭಿನಂದಿಸಿದರು. ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜಾ ರವರು ಕಾರ್ಯಾಗಾರವನ್ನು ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಾಗಾರದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅವಧಿಯನ್ನು ಆಯೋಜಿಸಲಾಗಿತ್ತು.
ಇದೇ ಸಂಧರ್ಭದಲ್ಲಿ ಕಾಲೇಜಿನ ಡೀನ್, ವಿಭಾಗದ ಮುಖ್ಯಸ್ಥರು, ಸಿಬ್ಬಂದಿ ವರ್ಗ ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಸುಕೇಶ್ ಸ್ವಾಗತಿಸಿ, ಮಾಧುರಿ ವಂದಿಸಿದರು, ಅಮರ್ ಕಾರ್ಯಕ್ರಮ ನಿರೂಪಿಸಿದರು
.