ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ರಾಜ್ಯಾದ್ಯಂತ 1.36 ಕೋಟಿ ಗಿಡಗಳನ್ನು ನೆಡುವ ಗುರಿ ಹೊಂದಲಾಗಿದೆ- ಹೆಚ್.ನಾಗೇಶ್
ಕೋಲಾರ : ರಾಜ್ಯ ಸರ್ಕಾರವು ಪ್ರಸುತ್ತ ಸಾಲಿನಲ್ಲಿ ರಾಜ್ಯಾದ್ಯಂತ 1.36 ಕೋಟಿ ಗಿಡಗಳನ್ನು ನೆಡುವ ಗುರಿ ಹೊಂದಲಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ನಾಗೇಶ್ ಅವರು ತಿಳಿಸಿದರು
ಇಂದು ವಿಶ್ವ ಪರಿಸರ ದಿನಾಚರಣೆಯ ಆಂಗವಾಗಿ ಸಾಮಾಜಿಕ ಅರಣ್ಯ ಮತ್ತು ವಲಯ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ನಗರಸಭೆ ಉದ್ಯಾನವನ ಟಮಕದಲ್ಲಿ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ಮಾತನಾಡಿ ಎಲ್ಲ ಗ್ರಾಮ ಪಂಚಾಯಿತಿಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ಗಿಡ ಮರಗಳನ್ನು ಬೆಳೆಸಬೇಕು. ನೀಲಗಿರಿ ಮರಗಳನ್ನು ಬೆಳಸುವುದರಿಂದ ಅಂತರ್ಜಲ ಮಟ್ಟ ಕುಸಿಯುತ್ತೆದೆ ಹಾಗೂ ಮಳೆ ಬೀಳುವ ಪ್ರಮಾಣ ಕಡಿಮೆಯಾಗುತ್ತದೆ ಅದರಿಂದ ನೀಲಗಿರಿಗನ್ನು ತೆರವುಗೊಳಿಸಬೇಕು ಜೊತೆಗೆ ಪ್ರಾಣಿ ಸಂಕುಲಕ್ಕೆ ಹಾಗೂ ಜನರಿಗೆ ಅನುಕೂಲವಾಗುವ ಹಣ್ಣಿನ ಗಿಡ ಮರಗಳನ್ನು ಬೆಳೆಸಬೇಕು ಎಂದು ತಿಳಿಸಿದರು.
ಪ್ರತಿಯೊಬ್ಬರು ತಮ್ಮ ಮನೆ ಆಂಗಳದಲ್ಲಿ ಮರಗಿಡಗಳನ್ನು ಬೆಳಸಬೇಕು ಇದರಿಂದ ಉತ್ತಮ ಮಳೆ, ಗಾಳಿ ಸಿಗುತ್ತದೆ ಹಾಗೂ ನಮ್ಮ ಆರೋಗ್ಯವು ಕಾಪಾಡಿಕೊಳ್ಳಬಹುದು. ಆರಣ್ಯ ಆಧಿಕಾರಿಗಳು ಗಿಡ ನೆಡುವ ಕಾರ್ಯವನ್ನು ಜಿಲ್ಲಾದ್ಯಾಂತಹ ಮಾಡಬೇಕು. ಇದರಿಂದ ಜಿಲ್ಲೆಗೆ ಉತ್ತಮ ಮಳೆಯಾಗುತ್ತದೆ ಎಂದು ಆಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಸಿ ಎಸ್ ವೆಂಕಟೇಶ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಯೊಶೋಧ ಕೃಷ್ಣಮೂರ್ತಿ, ಜಿಲ್ಲಾಧಿಕಾರಿಗಳಾದ ಸತ್ಯಭಾಮ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿಗಳಾದ ಜಾಹ್ನವಿ, ಸಾಮಾಜಿಕ ಅರಣ್ಯಾಧಿಕಾರಿ ದೇವರಾಜ್ ಸೇರಿದಂತೆ ಇತರರು ಭಾಗವಹಿಸಿದ್ದರು.